ಶನಿವಾರ, ಜುಲೈ 31, 2021
25 °C

ಉಡುಪಿ: ವಾರಸುದಾರರು ಪತ್ತೆಯಾಗದ ಶವಗಳ ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ವಾರಸುದಾರರು ಪತ್ತೆಯಾಗದ ನಾಲ್ಕು ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಿಸಲಾಯಿತು.

ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಶವಸಂಸ್ಕಾರ ಮಾಡಿದರು. 

ಮೃತರು ಹಿಂದೆ ಸಾರ್ವಜನಿಕರ ಸ್ಥಳಗಳಲ್ಲಿ ಅಸ್ವಸ್ಥರಾಗಿ ಬಿದ್ದಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರಿಂದ ಶವಗಳನ್ನು ವಾರಸುದಾರರಿಗೆ ಒಪ್ಪಿಸಲು ಶವಾಗಾರದಲ್ಲಿ ಇಡಲಾಗಿತ್ತು. ಯಾರೂ ಶವ ಸ್ವೀಕರಿಸಲು ಬಾರದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ತಿಳಿಸಿದರು.

ಅಂತ್ಯಸಂಸ್ಕಾರ ವೇಳೇ ನಗರ ವಲಯ ಭಜನಾ ಮಂಡಳಿಗಳ ಅಧ್ಯಕ್ಷ ಕಿಶೋರ ಕನ್ನಾರ್ಪಾಡಿ, ರಮಾನಂದ ದೇವಾಡಿಗ, ಮಧ್ವರಾಜ್, ಸುಶೀಲ ರಾವ್, ಸಾಜಿ ಅಜ್ಜರಕಾಡು ಇದ್ದರು.

ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ:

ಬಿಹಾರ ಮೂಲದ ಅಸ್ಲಂ ಎಂಬಾತನ ಶವವನ್ನು ಪಡೆಯಲು ವಾರಸುದಾರರು ಬಾರದಿದ್ದರಿಂದ ಸಾಮಾಜಿಕ ಕಾರ್ಯರ್ತ ಅನ್ಸಾರ್ ಅಹಮದ್ ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು. ಮುಖಂಡರಾದ ನಾಸಿರ್ ಯಾಕೂಬ್, ಅತಿಫ್ ಉದ್ಯಾವರ, ಆದಿಲ್, ಶಾಹುಲ್, ಶಾಹಿಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು