ಮೀನು ವ್ಯಾಪಾರಿ ಮೇಲೆ ದಾಳಿ, ಚೂರಿ ಇರಿತ

ಸೋಮವಾರ, ಜೂನ್ 24, 2019
24 °C

ಮೀನು ವ್ಯಾಪಾರಿ ಮೇಲೆ ದಾಳಿ, ಚೂರಿ ಇರಿತ

Published:
Updated:

ಉಡುಪಿ: ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಶುಕ್ರವಾರ ಬೆಳಿಗ್ಗೆ ದುಷ್ಕರ್ಮಿಗಳ ತಂಡವೊಂದು ಮೀನು ವ್ಯಾಪಾರಿಯ ಮೇಲೆ ದಾಳಿ ನಡೆಸಿ ಚೂರಿಯಿಂದ ಇರಿದು ಪರಾರಿಯಾಗಿದೆ.

ಮಂಗಳೂರಿನ ಪರಂಗಿಪೇಟೆಯ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಯಾಜ್ ಬೆಳಿಗ್ಗೆ ಪರಿಚಿತರೊಂದಿಗೆ ಮಂಗಳೂರಿನಿಂದ ಮಲ್ಪೆ ಬಂದರಿಗೆ ವ್ಯವಹಾರದ ಉದ್ದೇಶದಿಂದ ಬಂದಿದ್ದರು. ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಚೂರಿಯಿಂದ ದೇಹದ ಹಲವೆಡೆ ಇರಿದಿದ್ದಾರೆ.

ಮಲ್ಪೆ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !