ಉಡುಪಿ: ಕುಂದಾಪುರ ತಾಲ್ಲೂಕು ಶಂಕರನಾರಾಯಣದ ಮೂಡ ಬೈಲೂರಿನ ತೋಟದ ಪಂಪ್‌ಸೆಟ್ ಶೆಡ್‌ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದ ಸಂದರ್ಭ ವಿದ್ಯುತ್ ಶಾಕ್‌ನಿಂದ ವ್ಯಕ್ತಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶ ಮೂಲದ ವಸಿಷ್ಠ ಪಾಸ್ವಾನ್ (34) ಮೃತ ವ್ಯಕ್ತಿ. ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಅವರೊಂದಿಗೆ ಕೆಲಸಕ್ಕೆ ಬಂದಿದ್ದ ವಸಿಷ್ಠ ಪಾಸ್ವಾನ್ ಸೋಮವಾರ ರಾತ್ರಿ ಮೊಬೈಲ್ ಚಾರ್ಜ್‌ಗೆ ಹಾಕಿದಾಗ ಶಾಕ್ ಹೊಡೆದಿದೆ.

ಕೂಡಲೇ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶಂಕರ ನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ

ಉಡುಪಿ: ತಾಲ್ಲೂಕಿನ 80ನೇ ಬಡಗಬೆಟ್ಟು ಗ್ರಾಮದ ದಶರಥ ನಗರದ ಎಂ.ಎಂ. ಟವರ್ಸ್‌ನಲ್ಲಿ ವಾಸವಿದ್ದ ಡಿನ್ ಲಿಯು ಚೊಂಗ್ (19) ಎಂಬಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮಣಿಪಾಲ ಠಾಣೆ ಯುಡಿಆರ್ ಪ್ರಕರಣ ದಾಖಲಾಗಿದೆ.

ಚಿರತೆ ರಕ್ಷಣೆ:

ಉಡುಪಿ: ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಪಾಡಿ ಪದವು ಬಳಿಯ ಕಾಡಿನಲ್ಲಿ ತಂತಿ ಬೇಲಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ.

ಚಿರತೆ ಸಿಲುಕಿರುವ ಬಗ್ಗೆ ಮಾಹಿತಿ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಬಳಿಕ ಸುರಕ್ಷಿತವಾಗಿ ಸೆರೆ ಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.