ಚಂದ್ರ ಹೆಮ್ಮಾಡಿ ಬಂಧನ ಅವಧಿ ವಿಸ್ತರಣೆ

7

ಚಂದ್ರ ಹೆಮ್ಮಾಡಿ ಬಂಧನ ಅವಧಿ ವಿಸ್ತರಣೆ

Published:
Updated:
Deccan Herald

ಉಡುಪಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ ನ್ಯಾಯಾಂಗ ಬಂಧನದ ಅವಧಿಯನ್ನು ಜಿಲ್ಲಾ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ 15ದಿನಗಳವರೆಗೆ ವಿಸ್ತರಿಸಿದೆ.

ಬಂಧನದ ಅವಧಿ ಮುಕ್ತಾಯವಾಗಿದ್ದರಿಂದ ಸೋಮವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭ ವಿಚಾರಣೆ ನಡೆಸಿದ ನ್ಯಾಯಾಧೀಶರು ಡಿ.31ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು.

ಚಂದ್ರ ಹೆಮ್ಮಾಡಿ ವಿರುದ್ಧ ಬೈಂದೂರು, ಗಂಗೊಳ್ಳಿ, ಕುಂದಾಪುರ, ಕೊಲ್ಲೂರು ಠಾಣೆಗಳಲ್ಲಿ 21 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಆರೋಪಿಯೊಬ್ಬನ ವಿರುದ್ಧ ದಾಖಲಾದ ಗರಿಷ್ಠ ಪೋಕ್ಸೋ ಪ್ರಕರಣ ಇದಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !