ಭಾನುವಾರ, ಜೂನ್ 26, 2022
21 °C

ಮದುವೆಗೆ ಮನೆಯವರಿಂದ ವಿರೋಧ; ಕಾರಿನೊಳಗೆ ನವದಂಪತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮದುವೆಗೆ ಮನೆಯವರಿಂದ ವಿರೋಧ ವ್ಯಕ್ತವಾಗಿದ್ದರಿಂದ ಮನನೊಂದ ಜೋಡಿ ಬ್ರಹ್ಮಾವರದ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ.

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (24), ಜ್ಯೋತಿ (22) ಆತ್ಮಹತ್ಯೆ ಮಾಡಿಕೊಂಡವರು.

ಮೇ 18ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್‌ನಲ್ಲಿ ಬಂದಿದ್ದ ಯಶವಂತ್‌ ಹಾಗೂ ಜ್ಯೋತಿ 21ರಂದು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದರು.

ಮಂಗಳೂರಿನಲ್ಲಿ ಸೆಲ್ಫ್‌ ಡ್ರೈವ್ ಕಾರ್ ಬಾಡಿಗೆ ಪಡೆದು ಮಧ್ಯರಾತ್ರಿವರೆಗೂ ಸುತ್ತಾಡಿದ ಜೋಡಿ ಕುಟುಂಬದವರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೊಬೈಲ್‌ ಸಂದೇಶ ರವಾನಿಸಿ ಲೋಕೇಶನ್ ಕೂಡ ಕಳಿಸಿದ್ದಾರೆ. ನಂತರ ಕಾರಿನೊಳಗೆ ಕುಳಿತು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರಿನ ನಂಬರ್ ಪಡೆದು ಪರಿಶೀಲನೆ ನಡೆಸಿದ ಬ್ರಹ್ಮಾವರ ಪೊಲೀಸರಿಗೆ ಮೃತರ ಮಾಹಿತಿ ಲಭ್ಯವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು