ಉಡುಪಿ: ಮುಂಬೈ ಮೂಲದ ಬಾರ್ ಮಾಲೀಕವಶಿಷ್ಟ ಸತ್ಯನಾರಾಯಣ ಯಾದವ್ ಕೊಲೆ ಪ್ರಕರಣದಲ್ಲಿ ಸೈಫ್ ಅಲಿಯಾಸ್ ಸೈಫುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವಶಿಷ್ಟ ಯಾದವ್ ಕೊಲೆ ಪ್ರಕರಣದಲ್ಲಿ ಈಗಾಗಲೇಸುಮಿತ್ ಮಿಶ್ರಾ, ಅಬ್ದುಲ್ ಶುಕೂರ್, ಅವಿನಾಶ್ ಕರ್ಕೆರಾ, ಮೊಹಮ್ಮದ್ ಶರೀಪ್ನನ್ನು ಬಂಧಿಸಿದ್ದು, ಸೈಫ್ ಬಂಧನದ ಮೂಲಕ ಆರೋಪಿಗಳ ಸಂಖ್ಯೆ ಐದಕ್ಕೇರಿದಂತಾಗಿದೆ.

ಕೊಲೆಯಲ್ಲಿ ಸೈಫ್ ಪಾತ್ರವಿರುವ ಬಗ್ಗೆ ತಿಳಿಯುತ್ತಿದ್ದಂತೆ ಪೊಲೀಸರು ಕೊಡವೂರಿನಲ್ಲಿರುವ ಸೈಫ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಜನರ ಕೈವಾಡ ಶಂಕೆಯಿದ್ದು ತನಿಖೆ ನಡೆಯುತ್ತಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.

ಸೈಫ್ ಮೇಲೆ ಹಿಂದೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. ಜತೆಗೆ, ಕೊಲೆಗೆ ಕಾರಣ ಏನು, ಕೊಲೆಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಫೆ.17ರವರೆಗೆ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿದೆ. ಹಣಕಾಸಿನ ವಿಚಾರದಲ್ಲಿನ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.