ಮಂಗಳವಾರ, ನವೆಂಬರ್ 12, 2019
25 °C

ಗಾಂಜಾ ಮಾರಾಟ: ಬಿಹಾರದ ವ್ಯಕ್ತಿಯ ಬಂಧನ

Published:
Updated:

ಉಡುಪಿ: ಮಣಿಪಾಲದ ಇಂದ್ರಾಳಿ ರೈಲು ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಪವನ್ ಯಾದವ್‌ ಬಂಧಿತ ಆರೋಪಿ. ಈತ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ₹ 20000 ಮೌಲ್ಯದ 750 ಗ್ರಾಂ ಗಾಂಜಾ, ₹ 3000 ನಗದು ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ

ಉಡುಪಿ: ಶಿರ್ವ ಡಾನ್ ಬಾಸ್ಕೊ ಶಾಲೆಯ ಮುಖ್ಯೋಪಾಧ್ಯಾಯ ಮಹೇಶ್‌ ಡಿಸೊಜಾ ಅವರ ಸಾವಿನ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷಾ ವರದಿ ಕೈಸೇರಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹೇಶ್ ಡಿಸೋಜಾ ಅವರದ್ದು ಕೊಲೆ ಎಂಬ ಆರೋಪಕ್ಕೆ ತನಿಖೆಯಲ್ಲಿ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಶವ ಪರೀಕ್ಷೆ ವೇಳೆ ಸಂಗ್ರಹಿಸಿದ ದೇಹದ ಅಂಗಾಗಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು.

ಮಹೇಶ್ ಡಿಸೋಜಾ ಅವರ ಸಾವಿನ ಬಗ್ಗೆ ವದಂತಿಗಳನ್ನು ಹರಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)