ಉಡುಪಿ: ಬಾಲಕನಿಗೆ ಅನೈಸರ್ಗಿಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿ ಪ್ರಕರಣ ಬೆಳಕಿಗೆ ಬಂದಿತ್ತು. ಸಂತ್ರಸ್ತ ಬಾಲಕ ಹಾಗೂ ಪೋಷಕರು ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿಗಳು ಬಾಲಕನೊಂದಿಗೆ ಆಪ್ತಸಮಾಲೋಚನೆ ನಡೆಸಿ, ಪೋಷಕರಿಗೆ ಆತ್ಮ ಸ್ಟೈರ್ಯ ತುಂಬಿದ್ದು, ಬಾಲಕನ ಶಿಕ್ಷಣ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ.

ವಿಚಾರಣಾಧೀನ ಕೈದಿ ಸಾವು:

ಉಡುಪಿ: ಹಿರಿಯಡ್ಕಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸಯ್ಯದ್ ಮೆಹಬೂಬ್ ಪಾಷಾ ಎಂಬ ಆರೋಪಿ ಮಂಗಳವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗದ ಟಿಪ್ಪು ನಗರದ ಸಯ್ಯದ್ ಮೆಹಬೂಬ್ ಪಾಷಾ ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಜೈಲಿನಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ ಸಿಬ್ಬಂದಿ ಸಹಾಯದಿಂದ ಆರೋಪಿಯನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗ ಮಧ್ಯೆಯೇ ಸಯ್ಯದ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಜೈಲಿನ ಅಧೀಕ್ಷಕ ಶ್ರೀನಿವಾಸ್ ದೂರು ನೀಡಿದ್ದಾರೆ.

ಕೈದಿ ಸಾವಿನ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.