ಉಡುಪಿ: ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಬಾಲಕಿಯ ಸಾವಿಗೆ ಕಾರಣನಾದ ಕಾರು ಚಾಲಕ ಲಕ್ಷ್ಮೀಪ್ರಸಾದ್ ಭಟ್ ಎಂಬುವರಿಗೆ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಹಾಗೂ ₹ 11,000 ದಂಡ ವಿಧಿಸಿದೆ.
ಮಾರ್ಚ್ 16, 2017ರಂದು ಲಕ್ಷ್ಮೀಪ್ರಸಾದ್ ಭಟ್ ಕಾರಿನಲ್ಲಿ ಕುಕ್ಕಿಕಟ್ಟೆಯಿಂದ ಡಯಾನಾ ಕಡೆಗೆ ಹೋಗುವಾಗ ಕೀರ್ತಿಕುಮಾರ್ ಎಂಬುವರ ಪುತ್ರಿ ಕ್ಷಮಾಗೆ ಡಿಕ್ಕಿ ಹೊಡೆದಿದ್ದರು. ತಲೆಗೆ ಗಂಭೀರ ಪೆಟ್ಟುಬಿದ್ದು ಕ್ಷಮಾ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.
ಅಂದಿನ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ಆರೋಪಿಗೆ ಶಿಕ್ಷೆ ವಿದಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕೆ.ಮೋಹಿನಿ ವಾದ ಮಂಡಿಸಿದ್ದರು.
ಬೈಕ್ ಕಳವು
ಉಡುಪಿ: ಬನ್ನಂಜೆಯ ಮೂಡನಿಡಂಬೂರು ಗ್ರಾಮದ ಗರಡಿ ರಸ್ತೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳುವಾಗಿದೆ.
ಷಣ್ಮುಗ ಪೋತರಾಜ್ ಎಂಬುವರು ಅ.1ರಂದು ಕೆಲಸ ಮುಗಿಸಿಕೊಂಡು ಬಂದು ಮನೆಯ ಮುಂದೆ ಬೈಕ್ ನಿಲ್ಲಿಸಿದ್ದಾರು. ಬೆಳಿಗ್ಗೆ ಎದ್ದು ನೋಡುವಾಗ ಬೈಕ್ ಕಳುವಾಗಿರುವುದು ಗಮನಕ್ಕೆ ಬಂದಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.