ಸೋಮವಾರ, ನವೆಂಬರ್ 28, 2022
20 °C

ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಅ.19ರಂದು ಹಿರಿಯಡ್ಕದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯುತ್ತಿದ್ದ ಸಂದರ್ಭ ಬೆಂಗಾವಲು ಸಿಬ್ಬಂದಿಗೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ರಾಹಿಕ್‌ನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಆರೋಪಿ ರಾಹಿಕ್ ಬಂಧನಕ್ಕೆ ಕುಂದಾಪುರ ಇನ್‌ಸ್ಪೆಕ್ಟರ್ ಕೆ.ಆರ್.ಗೋಪಿಕೃಷ್ಣ ಮುಂದಾಳತ್ವದಲ್ಲಿ ಕುಂದಾಪುರ ಪಿಎಸ್‌ಐ ಸದಾಶಿವ ಗವರೋಜಿ, ಕೆ.ಪ್ರಸಾದ್‌ ನೇತೃತ್ವದಲ್ಲಿ 2 ತಂಡಗಳನ್ನು ರಚಿಸಲಾಗಿತ್ತು.

ಆರೋಪಿಯ ಸುಳಿವು ಪತ್ತೆಹಚ್ಚಿದ ತಂಡ ಮುಂಬೈನ ಲೋನಾವಾಲದ ಹೋಟೆಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಾನುವಾರ ಕುಂದಾಪುರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ರಾಹಿಕ್ ಮುಂಬೈನಲ್ಲಿಯೂ ಕಳವು ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ತಿಳಿಸಿದ್ದಾರೆ.

ತನಿಖಾ ತಂಡದಲ್ಲಿ ಸಿಬ್ಬಂದಿ ಸಂತೋಷ್ ಕುಮಾರ್, ಸಂತೋಷ್‌, ಸಿದ್ದಪ್ಪ, ಗಂಗೊಳ್ಳಿ ಠಾಣೆಯ ಚಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು