ಭಾನುವಾರ, ಸೆಪ್ಟೆಂಬರ್ 25, 2022
30 °C

ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ದೋಷಿ, ಇಂದು ಶಿಕ್ಷೆ ಪ್ರಮಾಣ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ 3 ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ಕೋರ್ಟ್ ದೋಷಿ ಎಂದು ಆದೇಶಿಸಿದ್ದು ಸೆ.6ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

ಹನುಮಂತಪ್ಪ ಚನ್ನಬಸಪ್ಪ ಕಂಬಳಿ ದೋಷಿಯಾಗಿದ್ದು ಈತ 2019ರ ಮಾರ್ಚ್‌ 6ರಂದು ಮನೆಗೆ ತೆರಳುತ್ತಿದ್ದ 17 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಾರ್ಚ್‌ 30ರಂದು ಆರೋಪಿಯ ಬಂಧನವಾಗಿತ್ತು.

ಆರೋಪಿ ವಿರುದ್ಧ ತನಿಖಾಧಿಕಾರಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 29 ಸಾಕ್ಷಿಗಳನ್ನು ಪ್ರಾಸಿಕ್ಯುಷನ್ ಪರವಾಗಿ ವಿಚಾರಣೆ ನಡೆಸಲಾಗಿತ್ತು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸಾಂದರ್ಭಿಕ ಸಾಕ್ಷ್ಯಗಳ ಹಾಗೂ ಸಾಕ್ಷಿಗಳ ಹೇಳಿಕೆ ಆಧಾರದಲ್ಲಿ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ. ಮಂಗಳವಾರ ಶಿಕ್ಷೆಯ ಪ್ರಮಾನ ಪ್ರಕಟಿಸಲಿದ್ದಾರೆ.

ಪ್ರಾಸಿಕ್ಯುಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.