ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರು: ಮಕ್ಕಳಿಗೆ ವಿದ್ಯೆಯ ಜತೆಗೆ ಕೃಷಿ ಒಲವು ಬೆಳೆಸಿ

ಬಂಜರು ಭೂಮಿ ಹಸನಾಗಿಸಲು ವಿದ್ಯಾರ್ಥಿಗಳಿಂದ ಗದ್ದೆ ನಾಟಿ ಕಾರ್ಯಕ್ರಮ
Published 9 ಜುಲೈ 2023, 7:30 IST
Last Updated 9 ಜುಲೈ 2023, 7:30 IST
ಅಕ್ಷರ ಗಾತ್ರ

ಬೈಂದೂರು: ‘ವ್ಯವಸಾಯ ದೇಶದ ಸಂಸ್ಕೃತಿಯಾಗಿದ್ದು ವಿದ್ಯಾರ್ಥಿಗಳಿಗೆ ವಿದ್ಯೆಯ ಜತೆಗೆ ಕೃಷಿಯ ಬಗ್ಗೆ ಒಲವು ಹಾಗೂ ಅರಿವು ಮೂಡಿಸುವುದು ಅಗತ್ಯವಿದೆ’ ಎಂದು ಬೈಂದೂರು ಶಾಸಕರು ಗುರುರಾಜ್ ಗಂಟಿಹೊಳೆ ಹೇಳಿದರು.

ಶಿರೂರು ಕರಾವಳಿಯಲ್ಲಿ ಶನಿವಾರ ಜೇಸಿಐ ಉಪ್ಪುಂದ, ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಸಂಯುಕ್ತ ಆಶ್ರಯದಲ್ಲಿ ಬಂಜರು ಭೂಮಿ ಹಸನಾಗಿಸುವ ಸಂಕಲ್ಪದೊಂದಿಗೆ ‘ವಿದ್ಯಾರ್ಥಿಗಳಿಂದ ಗದ್ದೆ ನಾಟಿ’ ಎಂಬ ವಿಶೇಷ ಕಾರ್ಯಕ್ರಮವನ್ನು ನಾಟಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜೇಸಿಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾಲೇಜು ಪ್ರಾಂಶುಪಾಲ ನಾಗರಾಜ ಶೆಟ್ಟಿ, ಜೇಸಿಐ ವಲಯ 15ರ ಕಾರ್ಯಕ್ರಮ ವಿಭಾಗದ ನಿರ್ದೇಶಕಿ ಅಕ್ಷತಾ ಗಿರೀಶ್ ಐತಾಳ್, ಪತ್ರಕರ್ತ ಗಣೇಶ್ ಗಾಣಿಗ ಉಪ್ಪುಂದ, ಶಿರೂರು ರೈತರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಜೇಸಿಐ ನಿಕಟಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ, ಅಶೋಕ್ ಶೆಟ್ಟಿ ಕಾರಿಕಟ್ಟೆ, ಯುವಶಕ್ತಿ ಅಧ್ಯಕ್ಷ ವಿಠಲ ಬಿಲ್ಲವ, ಬೈಂದೂರು ಕೃಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಅನುಷಾ ಇದ್ದರು.

ಶಿರೂರು ರೈತ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ ಹಾಗೂ ಪ್ರಗತಿಪರ ಕೃಷಿಕ ವೆಂಕಟ ಪೂಜಾರಿ ಕಾಳನಮನೆ ಅವರನ್ನು ಸನ್ಮಾನಿಸಲಾಯಿತು. ಎನ್.ಎಸ್.ಎಸ್. ಯೋಜನಾಧಿಕಾರಿ ಲತಾ ಪೂಜಾರಿ ಸ್ವಾಗತಿಸಿದರು. ನವೀನ್ ಎಚ್‌.ಜಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT