ಗುರುವಾರ , ಜನವರಿ 21, 2021
26 °C

ಕೋವಿಡ್ ಲಸಿಕೆ ಬಗ್ಗೆ ಅಪಪ್ರಚಾರ ದುರ್ದೈವದ ಸಂಗತಿ: ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೋವಿಡ್ ಲಸಿಕೆಯ ಬಗ್ಗೆಯೂ ಅಪಪ್ರಚಾರ ಮಾಡುತ್ತಿರುವುದು ದುರ್ದೈವದ ಸಂಗತಿ. ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕಿಸಿದರು.

ನಗರದಲ್ಲಿ ಮಂಗಳವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರು ಕೋವಿಡ್ ಲಸಿಕೆ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಆದರೆ, ಕೆಲವು ಪಕ್ಷಗಳಿಗೆ ವಿಶ್ವಾಸವಿಲ್ಲ. ಅಂಥವರನ್ನು ಜನರು ದೇಶದ ರಾಜಕಾರಣದಿಂದ ಅಳಿಸಿ ಹಾಕಲಿದ್ದಾರೆ. ದೇಶದಲ್ಲಿ ಲಸಿಕೆ ತಯಾರಾದರೆ ಅವರಿಗೆ ನಂಬಿಕೆ ಬರುತ್ತಿಲ್ಲ.  ದೇಶದ ವಿಜ್ಞಾನಿಗಳ ಮೇಲೆಯೂ ವಿಶ್ವಾಸವಿಲ್ಲ. ಲಸಿಕೆ ಇಟಲಿಯಿಂದ ಬಂದಿದ್ದರೆ, ಉತ್ತಮ ಲಸಿಕೆ ಎಂದು ಪ್ರಮಾಣಪತ್ರ ಕೊಡುತ್ತಿದ್ದರು ಎಂದು ಪಕ್ಷದ ಹೆಸರೇಳದೆ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಬಳಿಕ 50 ವರ್ಷ ಮೇಲ್ಪಟ್ಟರಿಗೆ ಕೋವಿಡ್ ಲಸಿಕೆ ಹಾಕಲಾಗುವುದು. ಲಸಿಕೆ ಹಾಕುವ ಪ್ರಕ್ರಿಯೆಯನ್ನು ಎಚ್ಚರಿಕೆಯಿಂದ ಮಾಡಲಾಗುವುದು ಎಂದರು.

ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಬಿಜೆಪಿಯಲ್ಲಿ ಯೋಗ್ಯತೆ ಇರುವವರು ಬಹಳಷ್ಟು ಮಂದಿ ಇದ್ದಾರೆ, ಆದರೆ ಸಚಿವರಾಗುವ ಯೋಗ ಯಾರಿಗಿದೆ ಎಂಬ ಪ್ರಶ್ನೆಗೆ ಶೀಘ್ರ ಉತ್ತರ ಸಿಗಲಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು