ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ ಬೇಕು, ಸುರಕ್ಷತೆ ಕಾಳಜಿಯೂ ಇರಬೇಕು: ಜಿ. ಜಗದೀಶ್ ಸಲಹೆ

ಸೈಬರ್ ಸೆಕ್ಯೂರಿಟಿ, ಇ-ಆಡಳಿತ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ
Last Updated 5 ಮಾರ್ಚ್ 2021, 14:52 IST
ಅಕ್ಷರ ಗಾತ್ರ

ಉಡುಪಿ: ದೈನಂದಿನ ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಬಳಸುವುದರ ಜತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಬೇಕಾಗಿರುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಜಿಲ್ಲಾ ಪಂಚಾಯಿತಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಆಡಳಿತ ತರಬೇತಿ ಸಂಸ್ಥೆ, ಇ-ಆಡಳಿತ ಕೇಂದ್ರ, ಇ- ಆಡಳಿತ ದತ್ತಾಂಶ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ವಿಷಯದ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಾಹಿತಿ ತಂತ್ರಜ್ಞಾನ ಬಳಕೆ ದೈನಂದಿನ ಜೀವನದ ಭಾಗವಾಗಿದ್ದು, ಬಳಕೆ ಹೆಚ್ಚಾಗುತ್ತಿದೆ. ಕೆಲವರು ತಂತ್ರಜ್ಞಾನದ ದುರುಪಯೋಗ ಪಡಿಸಿಕೊಂಡು ದೇಶದ ಯಾವುದೋ ಮೂಲೆಯಲ್ಲಿ ಕುಳಿತು ಅಮಾಯಕರ ಬ್ಯಾಂಕ್ ಖಾತೆಗಳಿಂದ ಹಣ ದೋಚುತ್ತಿದ್ದಾರೆ. ಇ-ಮೇಲ್ ಐಡಿಗಳನ್ನು ಹ್ಯಾಕ್ ಮಾಡಿ, ಹ್ಯಾಕ್, ಜಾಲತಾಣಗಳ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಅಂತರ್ಜಾಲ ಅಪರಾಧಗಳಿಗೆ ಕಡಿವಾಣ ಹಾಕಲು ಸುರಕ್ಷತೆಗೆ ಒತ್ತು ನೀಡುವುದು ಅಗತ್ಯವಿದೆ ಎಂದರು.

ಅಪರಿಚಿತ ವ್ಯಕ್ತಿಯ ಹೆಸರಿನಲ್ಲಿ ಇಮೇಲ್‌ ಅಥವಾ ಸಂದೇಶಗಳು ಬಂದರೆ ಎಚ್ಚರದಿಂದ ಇರಬೇಕು. ಅಪರಿಚಿತರು ಕಳುಹಿಸುವು ಮೇಲ್‌ಗಳ ಲಿಂಕ್ ತೆರೆದರೆ ವೈರಸ್‌ ಹರಡಿ ದತ್ತಾಂಶಗಳು ಹಾಳಾಗುವ ಹಾಗೂ ಸೈಬರ್‌ ಅಪರಾಧಿಗಳ ಕೈಸೇರುವ ಅಪಾಯ ಇರುತ್ತದೆ ಎಂದರು.

ಹೆಚ್ಚೆತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಜಿಲ್ಲಾ ಮಟ್ಟದಲ್ಲಿ ಸೈಬರ್ ಅಪರಾಧ ತಡೆ ತಾಣಗಳನ್ನು ತೆರೆಯಲಾಗಿದೆ. ಮುಂದೆ ತಾಲ್ಲೂಕು ಮಟ್ಟಕ್ಕೂ ವಿಸ್ತರಣೆಯಾಗಲಿದೆ. ಕಚೇರಿಯಲ್ಲಿ ಬಳಸುವ ಗಣಕಯಂತ್ರಗಳಿಗೆ ವೈರಸ್ ನಿರೋಧಕ ತಂತ್ರಾಂಶಗಳನ್ನು ತಪ್ಪದೆ ಅಳವಡಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದರು.

ಎನ್‌ಐಟಿಕೆ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಲ್ವಿನ್ ರೋಶನ್ ಪೈಸ್ ಮಾತನಾಡಿ, ಆನ್‌ಲೈನ್‌ನಲ್ಲಿ ವ್ಯವಹಾರ ಹೆಚ್ಚಿದಂತೆ ಸುರಕ್ಷತೆ ಮತ್ತು ಜಾಗೃತಿ ಇಲ್ಲದೆ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಷ್ಟಪಟ್ಟು ದುಡಿದು ಕೂಡಿಟ್ಟ ಹಣವನ್ನು ಕಳೆದುಕೊಂಡು ಜನರು ಕಂಗಾಲಾಗುತ್ತಿದ್ದಾರೆ. ಕಳೆದುಕೊಂಡ ಹಣ ಮರಳಿ ಸಿಗುವುದು ತೀರಾ ವಿರಳ ಎಂದರು.

ಸಾಮಾಜಿಕ ಜಾಲತಾಣಗಳಾದ ವಾಟ್ಸ ಆ್ಯಪ್‌, ಫೇಸ್‌ಬುಕ್, ಇನ್‌ಸ್ಟಾಗ್ರಾಂಗಳಲ್ಲಿ ಪಾಸ್ವರ್ಡ್‌ಗನ್ನು ನಿರಂತರವಾಗಿ ಬದಲಾಯಿಸುತ್ತಿರುವುದು ಅಗತ್ಯ ಎಂದರು. ಕಾರ್ಯಾಗಾರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಂಗಳೂರು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT