ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕನಿಗೆ ಗಾಯ

Last Updated 4 ಫೆಬ್ರುವರಿ 2021, 5:10 IST
ಅಕ್ಷರ ಗಾತ್ರ

ಕಾಪು: ಪಾಂಗಳದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.

ಚಾಲಕ ಹಾಗೂ ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ರಸ್ತೆ ಮಧ್ಯದ ಬ್ಯಾರಿಕೇಡ್‌ಗಳು ಕಿತ್ತುಬಂದಿದ್ದು, ಲಾರಿ ಜಖಂ ಆಗಿದೆ. ಸಿಲಿಂಡರ್‌ಗಳು ರಸ್ತೆಯ ಮೇಲೆಲ್ಲ ಬಿದ್ದಿದ್ದವು.

ಲಾರಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿತ್ತು. ಅಪಘಾತದಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ಕಾಪು ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT