ಮಂಗಳೂರು/ ಉಡುಪಿ: ಡೀಸೆಲ್ ದರ ಏರಿಕೆಯಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಜಿಲ್ಲೆಯ ಖಾಸಗಿ ಬಸ್ ಮಾಲೀಕರೊಂದಿಗೆ ಚರ್ಚೆ ನಡೆಸಿ ದರ ಹೆಚ್ಚಳದ ಕುರಿತಂತೆ ಚಿಂತನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ ತಿಳಿಸಿದರು.

ಟಿಕೆಟ್ ದರ ಏರಿಕೆ ಮಾಡುವ ಬಗ್ಗೆ ಮೇ 19ರಂದು ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಡೀಸೆಲ್ ದರ ಏರಿಕೆ ಸೇರಿದಂತೆ ವಿವಿಧ ಖರ್ಚು ವೆಚ್ಚಗಳ ಬಗ್ಗೆ, ನಷ್ಟವನ್ನು ಸರಿದೂಗಿಸುವ ಬಗ್ಗೆ ಚರ್ಚೆ ನಡೆಸಿ ವೈಜ್ಞಾನಿಕವಾಗಿ ದರ ಹೆಚ್ಚಿಸಲಾಗುವುದು. ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ, ಹೊರೆಯಾಗದಂತೆ ಕ್ರಮ ವಹಿಸಲಾಗುವುದು. ದರ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

2021ರಲ್ಲಿ ಕೊನೆಯ ಬಾರಿ ಜಿಲ್ಲೆಯಲ್ಲಿ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಆ ಬಳಿಕ ಬಸ್ನ ವಿಮೆ, ಬ್ಯಾಟರಿ, ಬಿಡಿಭಾಗಗಳು, ಟೈರ್, ಆಯಿಲ್, ಗ್ರೀಸ್, ಮೆಕ್ಯಾನಿಕ್ ಕೆಲಸ ಮುಂತಾದವುಗಳಿಗೆ ಹಂತ ಹಂತವಾಗಿ ಸುಮಾರು ಶೇ 30ರಷ್ಟು ಹೆಚ್ಚಳವಾಗಿದೆ. ಡೀಸೆಲ್ ಬೆಲೆಯೂ ಹಲವಾರು ಬಾರಿ ಏರಿಕೆಯಾಗಿದೆ. ಆದರೂ ಜನರಿಗೆ ಹೊರೆಯಾಗುತ್ತದೆ ಎನ್ನುವ ಕಾರಣಕ್ಕೆ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ ಎಂದರು.

ಕೋವಿಡ್– 19 ಸಂದರ್ಭದಲ್ಲಿ ಸರ್ಕಾರ ಖಾಸಗಿ ಬಸ್ಗಳಿಗೆ ತೆರಿಗೆ ವಿನಾಯಿತಿ ನೀಡಿಲ್ಲ. ಬಸ್ ಚಾಲಕರು, ನಿರ್ವಾಹಕರು ಕೆಲಸವಿಲ್ಲದೆ ಮನೆಯಲ್ಲಿ ಇದ್ದಾಗ ಸಬ್ಸಿಡಿ ನೀಡಿಲ್ಲ. ಕೆಎಸ್ಆರ್ಟಿಸಿ ಯವರಿಗೆ ತೆರಿಗೆ ವಿನಾಯಿತಿ, ಸಬ್ಸಿಡಿ ನೀಡಿತ್ತು. ಪ್ರಸ್ತುತ ಸರ್ಕಾರ ಡೀಸೆಲ್ ದರ ಏರಿಕೆಗೊಳಿಸಿರಯವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ನಷ್ಟ ಎದುರಿಸುತ್ತಿದ್ದೇವೆ ಎಂದು ಅವರು ಹೇಳಿದರು.

‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರುವುದರಿಂದ ಬಸ್ಗಳ ದರ ಏರಿಕೆಯೂ ಅನಿವಾರ್ಯವಾಗಿದೆ. ಸೋಮವಾರ ಸಭೆ ನಡೆಸಿ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದುವರೆಗೆ ದರ ಏರಿಕೆ ಮಾಡಿಲ್ಲ. ಕಾಂಟ್ರ್ಯಾಕ್ಟ್ ಕ್ಯಾರಿಯೇಜ್ ಬಸ್ಗಳು ದರ ಏರಿಕೆ ಮಾಡಿರಬಹುದು ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ದರ ಏರಿಕೆಗಾಗಿ ನಾವು ರಾಜ್ಯ ಸರ್ಕಾರಕ್ಕೂ ಮನವಿ ಮಾಡಲಿದ್ದೇವೆ’ ಎಂದು ರಾಜ್ಯ ಬಸ್ ಮಾಲೀಕರ ಸಂಘದ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.