ಉಡುಪಿ: ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುತ್ತವೆ. ಮತ್ತೊಬ್ಬರ ಗೆಲುವನ್ನು ಸಹ ಸಂಭ್ರಮಿಸುವ ಮನೋಭಾವವನ್ನು ನಾವು ಬೆೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.