ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಗರಸಭೆ ಜಾಗದಲ್ಲಿ ನಿರ್ಗತಿಕರಿಗೆ ತಂಗಲು ವ್ಯವಸ್ಥೆ ಮಾಡಿ’

ಸಾಂಕ್ರಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ: ಡಿಸಿ ಜಗದೀಶ್‌
Last Updated 11 ನವೆಂಬರ್ 2020, 14:20 IST
ಅಕ್ಷರ ಗಾತ್ರ

ಉಡುಪಿ: ರೋಗ ಬಂದಾಗ ಎಚ್ಚೆತ್ತುಕೊಳ್ಳುವ ಬದಲು, ರೋಗ ಬರುವ ಮುನ್ನ ಮುನ್ನೆಚ್ಚರಿಕೆ ವಹಿಸಬೇಕಾಗಿರುವುದು ಬಹಳ ಮುಖ್ಯ. ಕೋವಿಡ್ ಕಾಲಘಟ್ಟದಲ್ಲಿ ಸಾರ್ವಜನಿಕರು ಸುರಕ್ಷತೆಗೆ ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ, ಜಿಲ್ಲಾ ಮಟ್ಟದ ಡೆಂಗಿ ಸಮನ್ವಯ ಸಮಿತಿ, ಸಾಮಾಜಿಕ ಸವಲತ್ತುಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಈವರೆಗೆ 118 ಮಲೇರಿಯಾ, 139 ಡೆಂಗಿ, 10 ಚಿಕನ್‌ಗುನ್ಯಾ ಪ್ರಕರಣಗಳು ಕಂಡುಬಂದಿವೆ. ಈ ಸಾಂಕ್ರಮಿಕ ರೋಗಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆಗಳು ಹೆಚ್ಚಿರುವುದರಿಂದ, ಆರೋಗ್ಯ ಇಲಾಖೆ ರೋಗ ಹರಡದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲೇರಿಯಾ, ಚಿಕನ್‌ ಗುನ್ಯ ಹಾಗೂ ಡೆಂಗಿ ರೋಗಾಣುಗಳು ಸೊಳ್ಳೆಗಳ ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತವೆ. ಇಂತಹ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಜನರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಬಸ್ ನಿಲ್ದಾಣಗಳಲ್ಲಿ ತಂಗುವ ನಿರ್ಗತಿಕರಿಗೆ ನಗರಸಭೆಯ ಶೆಲ್ಟರ್‌ಗಳಲ್ಲಿ ತಂಗುವ ವ್ಯವಸ್ಥೆ ಮಾಡಬೇಕು ಎಂದರು.

ಎಚ್ಐವಿ ಸೋಂಕಿತರಿಗೆ ಸರ್ಕಾರದ ವಿಶೇಷ ವರ್ಗ ಯೋಜನೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ತಲುಪಿಸುವ ಕೆಲಸ ಪರಿಣಾಮಕಾರಿಯಾಗಿ ನಡೆಯಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಆಸ್ವತ್ರೆಯಲ್ಲಿ 11,300 ಹಾಗೂ ಖಾಸಗಿ ಆಸ್ವತ್ರೆಯಲ್ಲಿ 13,647 ಫಲಾನುಭವಿಗಳು ಸೆರಿ 24,947 ಜನ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT