ಸೋಮವಾರ, ಸೆಪ್ಟೆಂಬರ್ 20, 2021
23 °C
ಮಾರ್ಗಮಧ್ಯೆ ತಪ್ಪಸಿಕೊಂಡರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಕ್ವಾರಂಟೈನ್‌ಗೆ ತಪ್ಪು ವಿಳಾಸ ನೀಡಿದರೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಹೊರ ರಾಜ್ಯಗಳಿಂದ ಬಂದವರು ಕ್ವಾರಂಟೈನ್‌ಗೆ ತೆರಳುವ ಮುನ್ನ ತಪ್ಪು ವಿಳಾಸ, ದೂರವಾಣಿ ಸಂಖ್ಯೆ ನೀಡಿದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಹೊರ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆ್ಯಪ್‌ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗವಾಗಿ ಬರುವವರು ಗಡಿಯಲ್ಲಿ ಸ್ವೀಕಾರ ಕೇಂದ್ರದಲ್ಲಿಲ್ಲಿ ಹಾಜರಾಗಿ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಿ ಕ್ವಾರಂಟೈನ್‌ಗೆ ಒಳಪಡಬೇಕು. ಮಹಾರಾಷ್ಟ್ರದಿಂದ ಆಗಮಿಸುವವರು 7 ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು. ಇತರೆ ರಾಜ್ಯಗಳಿಂದ ಬರುವವರು 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು.

ರೈಲಿನಲ್ಲಿ ಬರುವವರು ನಿಲ್ದಾಣಗಳಲ್ಲಿನ ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ವಿಳಾಸ ಮತ್ತು ದೂರವಾಣಿ ಸಂಖ್ಯೆ ನೋಂದಾಯಿಸಬೇಕು. ವಿಳಾಸದ ಸ್ಥಳಕ್ಕೆ ತೆರಳದೆ ಮಾರ್ಗಮಧ್ಯೆ ತಪ್ಪಿಸಿಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು. ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವಂತ ಖರ್ಚಿನಲ್ಲಿ ತೆರಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ನೋಂದಣಿಯಾದ ಎಲ್ಲರಿಗೂ ಸೀಲ್ ಹಾಕಿ, ಸಂಬoದಪಟ್ಟ ತಾಲ್ಲೂಕಿನ ಗ್ರಾಮಗಳಿಗೆ ಕಳುಹಿಸಲಾಗುವುದು ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ, ಗ್ರಾಮ ಪಂಚಾಯಿತಿಗಳಲ್ಲಿನ ಕ್ವಾರಂಟೈನ್ ಕೇಂದ್ರಗಳಿಗೆ ಊಟೋಪಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು. ನಿತ್ಯ ಪರಿಶೀಲಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಹೊರರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಆರೋಗ್ಯ ಸೇತು, ಕ್ವಾರಂಟೈನ್ ವಾಚ್ ಮತ್ತು ಆಪ್ತಮಿತ್ರ ಅಪ್ಲಿಕೇಷನ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.