ಬುಧವಾರ, ಆಗಸ್ಟ್ 10, 2022
21 °C

ಉಡುಪಿ: ಸ್ಟೇಷನರಿ, ಮೊಬೈಲ್ ಅಂಗಡಿ ತೆರೆಯಲು ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ನಡೆಯುತ್ತಿರುವುದರಿಂದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ‌ಜೂನ್ 16ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 2ವರೆಗೆ ಬುಕ್ ಸ್ಟಾಲ್‌, ಸ್ಟೇಷನರಿ ಹಾಗೂ ಮೊಬೈಲ್ ಅಂಗಡಿಗಳನ್ನು ತೆರೆಯಲು ಅನುಮತಿ  ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಪುಸ್ತಕ, ಪೆನ್ ಹಾಗೂ ಸ್ಟೇಷನರಿ ವಸ್ತುಗಳ ಮಾರಾಟ ಅಂಗಡಿ, ಮೊಬೈಲ್‌ ಮಳಿಗೆ, ಮೊಬೈಲ್ ರಿಪೇರಿ ಹಾಗೂ ಉಪಕರಣಗಳ ಖರೀದಿ ಅವಶ್ಯ ಇರುವ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ಮಾತ್ರ ಪುಸ್ತಕ ಅಂಗಡಿ ಹಾಗೂ ಮೊಬೈಲ್ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜೂನ್ 14ರ ಬೆಳಿಗ್ಗೆ 6ರಿಂದ ಜಿಲ್ಲೆಯಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಕೈಗಾರಿಕೆಗಳು ಶೇ 50ರಷ್ಟು ಕಾರ್ಮಿಕರೊಂದಿಗೆ ಕಾರ್ಯ ನಿರ್ವಹಿಸಬಹುದು. ಗಾರ್ಮೆಂಟ್ಸ್‌ಗಳಲ್ಲಿ ಶೇ 30 ಸಿಬ್ಬಂದಿ ಕೆಲಸ ಮಾಡಬಹುದು.  ಸಿಮೆಂಟ್, ಕಬ್ಬಿಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರ ಸಂಬಂಧಿ ವಸ್ತುಗಳ ಮಾರಾಟ ಮಳಿಗೆಗಳು ತೆರೆಯಲು ಅನುಮತಿ ಇದೆ.

ಟ್ಯಾಕ್ಸಿ ಮತ್ತು ಆಟೋದಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಬಹುದು. ಮದುವೆಯಲ್ಲಿ ಗರಿಷ್ಠ 40 ಮಂದಿ, ಶವಸಂಸ್ಕಾರದಲ್ಲಿ ಗರಿಷ್ಠ 5 ಮಂದಿ ಮಾತ್ರ ಭಾಗವಹಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.