ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ದುಶ್ಚಟದಿಂದ ದೂರವಿದ್ದರೆ ಉತ್ತಮ ಆರೋಗ್ಯ: ಕೆ.ವಿದ್ಯಾಕುಮಾರಿ

ನಶಾಮುಕ್ತ ಭಾರತ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅಭಿಮತ
Published 13 ಆಗಸ್ಟ್ 2024, 3:19 IST
Last Updated 13 ಆಗಸ್ಟ್ 2024, 3:19 IST
ಅಕ್ಷರ ಗಾತ್ರ

ಉಡುಪಿ: ‘ಮಾದಕ ವಸ್ತುಗಳ ಚಟದಿಂದ ದೂರವಿದ್ದಾಗ ಮಾತ್ರ ಯುವಜನರು ಉತ್ತಮ ಆರೋಗ್ಯ ಹೊಂದಲು ಸಾಧ್ಯ’ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.

ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಕಾರ್ಯಕ್ರಮ ಹಾಗೂ ನಶಾಮುಕ್ತ ಭಾರತ ಅಭಿಯಾನದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವ ಪೀಳಿಗೆಯು ದುಶ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ನಶಾ ಮುಕ್ತ ಭಾರತ ಅಭಿಮಾನ ಹಮ್ಮಿಕೊಂಡಿದ್ದು, ಯುವಜನತೆಯು ಮಾದಕ ವ್ಯಸನಗಳ ದುಷ್ಪರಿಣಾಮಗಳನ್ನು ಅರಿಯುವುದರೊಂದಿಗೆ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಗಣನಾಥ್ ಎಕ್ಕಾರು ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೊಬೈಲ್ ಆರೋಗ್ಯ ವಾಹನಕ್ಕೆ ಚಾಲನೆ ನೀಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ. ಸಿದ್ದಲಿಂಗಪ್ಪ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಐ.ಪಿ ಗಡಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ, ರೆಡ್‌ಕ್ರಾಸ್‌ನ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಚಂದ್ರಶೇಖರ್, ರಮಾದೇವಿ, ಜಯಶ್ರೀ ಭಾಗವಹಿಸಿದ್ದರು.

ಭಾರತೀಯ ರೆಡ್ ಕ್ರಾಸ್‌ನ ಜಿಲ್ಲಾ ಸಭಾಪತಿ ಬಸ್ರೂರ್ ರಾಜೀವ ಶೆಟ್ಟಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ನಿರೂಪಿಸಿದರು.

ನಮ್ಮ ದೇಶದ ಅಪಾರ ಯುವ ಶಕ್ತಿಯ ಸದ್ಬಳಕೆಯಲ್ಲಿ ಮಾದಕ ವ್ಯಸನವು ಒಂದು ಸವಾಲಾಗಿದೆ. ಇದರ ವಿರುದ್ಧದ ಆಂದೋಲನವನ್ನು ಪ್ರತಿಯೊಬ್ಬ ವ್ಯಕ್ತಿಯ ಅಂತರಂಗಕ್ಕೂ ಮುಟ್ಟಿಸಬೇಕಾಗಿದೆ

-ಕೆ.ವಿದ್ಯಾಕುಮಾರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT