ಉಡುಪಿ: ಗರ್ಭಿಣಿಯರು ಹಾಗೂ ನವಜಾತ ಶಿಶುಗಳನ್ನು ನಿರಂತರ ಕಾಳಜಿ ಮಾಡಿದ್ದಲ್ಲಿ ಮಾತ್ರ ತಾಯಿ ಮರಣ ಪ್ರಮಾಣ ತಗ್ಗಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಅನುಷ್ಠಾನವನ್ನು ಮಾರ್ಗಸೂಚಿ ಅನ್ವಯ ನಿಗದಿತ ಕಾಲಾವಧಿಯಲ್ಲಿ ಕೈಗೊಂಡು ಜನರ ಆರೋಗ್ಯ ಸುಧಾರಣೆಗೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಜೈವಿಕ ವೈದ್ಯಕೀಯ ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಇವುಗಳನ್ನು ಸಂಗ್ರಹಿಸುವ ಏಜೆನ್ಸಿಗಳು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಅಲ್ಲದೆ ಔಷಧಿ ಬಾಟಲ್, ಡೈಪರ್ಗಳನ್ನು ಎಲ್ಲೆಂದರಲ್ಲಿ ಎಸೆದಲ್ಲಿ ನದಿ ಸೇರಿ, ಜಲ ಮಾಲಿನ್ಯ ಉಂಟಾಗುತ್ತದೆ. ಇವುಗಳ ನಿಯಂತ್ರಣಕ್ಕೆ ನಿಗಾ ವಹಿಸಬೇಕು ಎಂದರು.

ಕೆ.ಪಿ.ಎಂ.ಇ ಅಡಿಯಲ್ಲಿ ಅನುಮತಿ ಪಡೆದ ಕ್ಲಿನಿಕ್ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿ ಹಾಗೂ ವೈದ್ಯರ ಮೇಲಿನ ಹಲ್ಲೆ ಕುರಿತು ಜಾರಿಗೆ ತಂದಿರುವ ಕಾನೂನುಗಳ ಫಲಕಗಳನ್ನು ಎದ್ದು ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು ಎಂದ ಅವರು, ವೈದ್ಯಾಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಬೇಕು ಎಂದು ಸೂಚನೆ ನೀಡಿದರು.

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಹೆಚ್ಚು ಜನ ರೋಗಿಗಳು ಬರುತ್ತಿದ್ದಾರೆ. ಎಲ್ಲರಿಗೂ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಹೊಸದಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆಯುಷ್ಮಾನ್ ಯೋಜನೆ ಅಡಿಯಲ್ಲಿ ನಾಮನಿರ್ದೇಶನಗೊಳಿಸಲು ಸರ್ಕಾರಕ್ಕೆ ಅನುಮೋದನೆಯನ್ನು ಸಲ್ಲಿಸಬೇಕು ಎಂದರು.

ಭ್ರೂಣ ಹತ್ಯೆ ಮತ್ತು ಲಿಂಗ ಪತ್ತೆಯಂತಹ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾಯ್ದೆಯನ್ವಯ ಕ್ರಮ ಕೈಗೊಳ್ಳಬೇಕು. ಸ್ಕ್ಯಾನಿಂಗ್ ಸೆಂಟರ್ಗಳಿಗೆ ಸಮಿತಿಯ ಸದಸ್ಯರು ಅನಿರೀಕ್ಷಿತವಾಗಿ ನಿರಂತರ ಭೇಟಿ ನೀಡಬೇಕು. ಪ್ರಸ್ತುತ ಸಾಲಿನಲ್ಲಿ ಕಳೆದ 5 ತಿಂಗಳಲ್ಲಿ ಲಿಂಗಾನುಪಾತ 1000 ಗಂಡು ಮಕ್ಕಳಿಗೆ 1015 ಹೆಣ್ಣು ಮಕ್ಕಳ ಜನನವಾಗಿದೆ ಎಂದರು.

ಬಿ.ಸಿ.ಜಿ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲೆಯಲ್ಲಿ ಒಟ್ಟು 45,857 ನೋಂದಣಿ ಮಾಡಿಸಿದ್ದು, ಬಿ.ಸಿ.ಜಿ ಲಸಿಕೆ ಜಿಲ್ಲೆಗೆ ಸರಬರಾಜು ಆದ ತಕ್ಷಣ ಲಸಿಕೆ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ವೈದ್ಯಾಧಿಕಾರಿ ಡಾ.ಐ.ಪಿ.ಗಡಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಾಗರತ್ನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.