ಮಂಗಳವಾರ, ಜನವರಿ 31, 2023
19 °C

ಕಾಂಗ್ರೆಸ್ ಮುಖಂಡ ಚಂದು ಪೂಜಾರಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ಮುದ್ರಾಡಿಯ ಬಾಚುಮಜಲ್ ಚಂದು ಪೂಜಾರಿ (95) ಬುಧವಾರ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಉದ್ಯಮಿ ಮನೋಜ್ ಪೂಜಾರಿ ಸಹಿತ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.

ಮಂಡಲ ಪಂಚಾಯತಿ ಸದಸ್ಯರಾಗಿ ಮುದ್ರಾಡಿಯ ಕಾಂಗ್ರೆಸ್ ಮುಖಂಡರಾಗಿ ಚಂದು ಪೂಜಾರಿ ಸಕ್ರಿಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅವರ ನಿಕಟವರ್ತಿಯಾಗಿದ್ದರು.

ಡಾ.ಎಂ.ವೀರಪ್ಪ ಮೊಯಿಲಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್‌ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿ ಹಲವು ನಾಯಕರು ಅಂತಿಮ ದರ್ಶನ ಪಡೆದರು.

ಚಂದು ಪೂಜಾರಿ ಅವರ ಅಂತ್ಯಕ್ರಿಯೆ ಮುದ್ರಾಡಿ ಬಾಚುಮಜಲು ಮನೆಯಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಪುತ್ರ ಮಂಜುನಾಥ ಪೂಜಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು