ಭಾನುವಾರ, ನವೆಂಬರ್ 17, 2019
21 °C

ಸ್ವರ್ಣ ನದಿಗೆ ಹಾರಿ ಯುವಕ ಸಾವು: ಶವ ಪತ್ತೆ

Published:
Updated:

ಉಡುಪಿ: ಕಲ್ಯಾಣಪುರ ಸೇತುವೆಯಿಂದ ಸ್ವರ್ಣ ನದಿಗೆ ಹಾರಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ.

ಬನ್ನಂಜೆಯ ದೀಕ್ಷಿತ್ ಶೆಟ್ಟಿ (26) ಮೃತ ಯುವಕ. ಭಾನುವಾರ ರಾತ್ರಿ ಸೇತುವೆ ಪಕ್ಕದಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ. ನದಿಗೆ ಹಾರಿರಬಹುದು ಎಂಬ ಶಂಕೆಯಿಂದ ದೋಣಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಸಂಜೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಿಳೆಗೆ ವಂಚನೆ

ಸರ್ಕಾರದ ಯೋಜನೆಯ ಹಣ ಕೊಡಿಸುವುದಾಗಿ ನಂಬಿಸಿ ವೃದ್ಧೆಯ ಬಳಿಯಿದ್ದ ಚಿನ್ನಾಭರಣ ದೋಚಿ ವಂಚಕ ಪರಾರಿಯಾಗಿದ್ದಾನೆ.

ಮಹಿಳೆಯನ್ನು ಪರಿಚಯಿಸಿಕೊಂಡ ವಂಚಕ, ನಯವಾಗಿ ಮಾತನಾಡಿ ನಂಬಿಕೆ ಹುಟ್ಟಿಸಿದ್ದಾನೆ. ಬಳಿಕ ಸರ್ಕಾರದ ಯೋಜನೆಯಡಿ ₹ 3 ಲಕ್ಷ ಕೊಡಿಸುವುದಾಗಿ ನಂಬಿಸಿ, ಚಿನ್ನಾಭರಣ ಪಡೆದು ಪರಾರಿಯಾಗಿದ್ದಾನೆ.

ವಂಚಕನ ಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರತಿಕ್ರಿಯಿಸಿ (+)