ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು: ದೀಪಾವಳಿ, ತುಳಸಿ ಹಬ್ಬ ಸಂಭ್ರಮ

Last Updated 8 ನವೆಂಬರ್ 2022, 6:30 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ಹಿರ್ಗಾನದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಯಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದರು.

ಸಂಸ್ಥಾಪಕ ಅಶ್ವತ್ಥ್‌ ಎಸ್.ಎಲ್. ಮಾತನಾಡಿ, ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿವೆ. ಆಧ್ಯಾತ್ಮಿಕವಾಗಿ ನೋಡಿದಾಗ ಶ್ರೇಷ್ಠ ಮೌಲ್ಯಗಳ ಪ್ರತೀಕವಾಗಿವೆ. ಎಲ್ಲರಲ್ಲೂ ಹಬ್ಬ ಸಾಮರಸ್ಯವನ್ನು ತರಲಿ ಎಂದರು.

ವಿದ್ಯಾರ್ಥಿಗಳು ಭಾರತೀಯ ಪರಂಪರೆಯನ್ನು ಬಿಂಬಿಸುವ ಉಡುಗೆ- ತೊಡುಗೆಗಳನ್ನು ಧರಿಸಿ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಭಾಗಿಯಾದರು. ಸಂಸ್ಥೆಯ ಮತ್ತೊಬ್ಬ ಸಂಸ್ಥಾಪಕ ಡಾ. ಗಣನಾಥಶೆಟ್ಟಿ, ಅಮೃತ್ ರೈ, ಆದರ್ಶ ಎಂ.ಕೆ, ವಿಮಲ್ ರಾಜ್, ಗಣಪತಿ ಕೆ.ಎಸ್, ಉಪನ್ಯಾಸಕರು ಇದ್ದರು.

ಸಂಸ್ಥೆಯ ಆವರಣದಲ್ಲಿ ದೀವಟಿಗೆ ಬೆಳಕಿನಲ್ಲಿ ಬಾಣ-ಬಿರುಸು, ಪಟಾಕಿ, ನಕ್ಷತ್ರ ಕಡ್ಡಿ, ಸುಡುಮದ್ದು ಪ್ರದರ್ಶನ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT