ಉಡುಪಿ: ಬೆಳಕಿನ ಹಬ್ಬ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ, ಸಡಗರ. ಹಿರಿಯರು ಕಿರಿಯರೆನ್ನದೆ ಪಟಾಕಿ ಸಿಡಿಸಿ ದೀಪಾವಳಿ ಹಬ್ಬ ಆಚರಿಸಿಕೊಳ್ಳುವವರೇ ಹೆಚ್ಚು.

ಪಟಾಕಿಗಳು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರೂ ಸ್ವಲ್ಪ ಎಚ್ಚರ ತಪ್ಪಿದರೂ ಬದುಕನ್ನೆ ಕತ್ತಲಾಗಿಸುವ ಸಾಧ್ಯತೆಯೂ ಇದೆ.

ಈ ಬಾರಿ ನಗರ ವ್ಯಾಪ್ತಿಯಲ್ಲಿ ನಾಲ್ಕು ಕಡೆಗಳಲ್ಲಿ ಮಾತ್ರ ಪಟಾಕಿ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಮಲ್ಪೆ, ದೊಡ್ಡಣಗುಡ್ಡೆ, ಮಣ್ಣಪಳ್ಳ ಮತ್ತು ಬೀಡಿನಗುಡ್ಡೆಯಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ನಿರ್ಮಿಸಲು ಸ್ಥಳ ನಿಗದಿ ಮಾಡಿದ್ದು, ಈಗಾಗಲೇ ಹಲವು ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಸ್ಥಾಪಿಸಲಾಗಿದೆ. ಈ ಅಂಗಡಿಗಳಲ್ಲಿ ಬುಧವಾರ ಸಂಜೆಯ ವೇಳೆ ಖರೀದಿ ಜೋರಾಗಿತ್ತು.

ಈ ಬಾರಿ ಪಟಾಕಿಗಳ ಬೆಲೆ ಕಳೆದ ವರ್ಷಕ್ಕಿಂತ ತುಸು ಜಾಸ್ತಿಯಾಗಿದೆ. ಆದರೂ ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸದಿರಲು ಸಾಧ್ಯವಿಲ್ಲ. ಅಂಗಡಿಯಿಂದ ಗ್ರೀನ್ ಪಟಾಕಿಗಳನ್ನೇ ಖರೀದಿಸಿದ್ದೇನೆ ಎಂದು ಮಣಿಪಾಲದ ಮಣ್ಣಪಳ್ಳದ ಪಟಾಕಿ ಅಂಗಡಿಗೆ ಖರೀದಿಗೆ ಬಂದಿದ್ದ ಗ್ರಾಹಕ ಮೋಹನ್ ಕುಮಾರ್ ತಿಳಿಸಿದರು.

ಮಣಿಪಾಲದ ಮಣ್ಣಪಳ್ಳದಲ್ಲಿ 12 ತಾತ್ಕಾಲಿಕ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಗುರುವಾರ ಪಟಾಕಿಗಳ ಮಾರಾಟ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಪಟಾಕಿ ಮಾರಾಟಗಾರ ಸುಶಾಂತ್ ತಿಳಿಸಿದರು.

ಜಿಲ್ಲಾಡಳಿತ ಸೂಚಿಸಿರುವ ಈ ಪ್ರದೇಶಗಳಲ್ಲಿ ಮಾತ್ರ ಪಟಾಕಿ ಮಾರಲು ಅವಕಾಶವಿದೆ. ಜನರು ಕೂಡ ಇಲ್ಲಿಂದ ಮಾತ್ರ ಖರೀದಿಸಬೇಕು ಎಂದೂ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಗಮನ ಸೆಳೆಯುವ ಗೂಡು ದೀಪ: ದೀಪಾವಳಿ ಹಬ್ಬದ ಅಂಗವಾಗಿ ನಗರದ ಹಲವು ಅಂಗಡಿಗಳಲ್ಲಿ ಬಗೆ ಬಗೆಯ ಗೂಡು ದೀಪಗಳನ್ನು ಮಾರಾಟಕ್ಕಿರಿಸಲಾಗಿದೆ. ಗ್ರಾಹಕರೂ ಇವುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ.

ಕೆಲವರು ಮನೆಗಳಲ್ಲಿ ಸಾಂಪ್ರದಾಯಿಕ ಶೈಲಿಯ ಗೂಡು ದೀಪಗಳನ್ನೂ ನಿರ್ಮಿಸಿದ್ದಾರೆ. ಕಾಗದ, ಬಿದಿರು ಮೊದಲಾದವುಗಳನ್ನು ಬಳಸಿ ಗೂಡು ದೀಪಗಳನ್ನು ತಯಾರಿಸಲಾಗುತ್ತದೆ.

ಎಲೆಕ್ಟ್ರಿಕ್ ದೀಪಗಳು: ಹಬ್ಬದ ಸಂದರ್ಭದಲ್ಲಿ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಲಂಕಾರಕ್ಕೆ ಬಲಸಲಾಗುತ್ತದೆ. ಈ ಕಾರಣಕ್ಕೆ ಎಲೆಕ್ಟ್ರಾನಿಕ್ಸ್ ಅಂಗಡಿಗಳಲ್ಲೂ ಬಗೆ ಬಗೆಯ ಎಲ್ಇಡಿ ವಿದ್ಯುತ್ ದೀಪಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ನಗರದಲ್ಲಿ ಹಣತೆಗಳ ಮಾರಾಟವೂ ಜೋರಾಗಿದೆ.

ಮಳಿಗೆಯವರು ಪಾಲಿಸಬೇಕಾದ ಕ್ರಮಗಳು

ಪಟಾಕಿ ಮಳಿಗೆಗಳು ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಮಗ್ರಿಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದಷ್ಟೂ ಬೆಂಕಿಯನ್ನು ತಡೆಗಟ್ಟುವ ಸಾಮಗ್ರಿಗಳನ್ನು ನಿರ್ಮಾಣಕ್ಕೆ ಉಪಯೋಗಿಸಬೇಕು.

ಮಳಿಗೆಯ ಮುಂಭಾಗದಿಂದ ಹಾಗೂ ಹಿಂಭಾಗದಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.ಪ್ರತಿಯೊಂದು ಮಳಿಗೆಗಳ ಗಾತ್ರ 10X10 ಚದರ ಅಡಿ ವಿಸ್ತೀರ್ಣಕ್ಕೆ ಸೀಮಿತಗೊಳಿಸಿರಬೇಕು ಮತ್ತು ಯಾವುದೇ ಹೆಚ್ಚಿನ ಮಿತಿಮೀರಿದ ದಾಸ್ತಾನಿನ ವ್ಯವಸ್ಥೆ ಇರಬಾರದು.

ಮಳಿಗೆಯಲ್ಲಿ ಒಂದು 9 ಲೀಟರ್ ಸಾರ್ಮಥ್ಯದ ವಾಟರ್ ಫೈಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ ನೀರನ್ನು ಇರಿಸಬೇಕು ಹಾಗೂ ಮಳಿಗೆಯ ಪಕ್ಕದಲ್ಲಿ ಎರಡು ಡ್ರಮ್ನಲ್ಲಿ ಕನಿಷ್ಠ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು. ಮಳಿಗೆಯಲ್ಲಿ ಅಡುಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬಂತೆ ಸೂಚನಾ ಫಲಕವನ್ನು ಹಾಕಬೇಕು.

ಪಟಾಕಿಯನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು. ರಾತ್ರಿ ವೇಳೆ ಮಳಿಗೆಯಲ್ಲಿ ಯಾರು ಮಲಗಬಾರದು. ಪಟಾಕಿ ಮಳಿಗೆಗಳಲ್ಲಿ ಪಟಾಕಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ಮಾರಾಟ ಮಾಡಬಹುದಾಗಿದೆ.ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವಂತಹ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ

ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಕಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ ಎಂದಿದ್ದಾರೆ.

ಸ್ಥಳೀಯ ಹಾಗೂ ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮೂಲಕ ಅವುಗಳನ್ನು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಪಟಾಕಿಗಳನ್ನು ಅಧಿಕಾರಿಗಳು ನಿಗದಿಪಡಿಸಿದ ತೆರೆದ ಪ್ರದೇಶಗಳಲ್ಲಿ ಸ್ಥಳೀಯ ಆಡಳಿದ ವತಿಯಿಂದ ಅನುಮತಿ ನೀಡಲಾಗಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದಿದ್ದಾರೆ.

ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದ್ದು ಉಳಿದ ಸಮಯದಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಕ್ಕಳು ಪಟಾಕಿಯನ್ನು ಸಿಡಿಸುವ ಸಂದರ್ಭದಲ್ಲಿ ಪೋಷಕರು ಜೊತೆಗಿದ್ದು ಯಾವುದೇ ಅನಾಹುತ ಉಂಟಾಗದಂತೆ ಕಾಳಜಿ ವಹಿಸಬೇಕು. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದೂ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಅಂದಾಜು 200ರಷ್ಟು ಪಟಾಕಿ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ದೀಪಾವಳಿ ಹಬ್ಬದ ಸಂದರ್ಭಗಳಲ್ಲಿ ನಮ್ಮ ಜಲವಾಹನಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿದ್ದೇವೆ.
ವಿನಾಯಕ ಯು. ಕಲ್ಗುಟ್ಕರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ

ಪಟಾಕಿ ಅಂಗಡಿಗಳಿಗೆ ಭೇಟಿ ನೀಡಿ ಮಾದರಿಯನ್ನು ಪರೀಕ್ಷೆಗೆ ಕಳುಹಿಸುತ್ತೇವೆ. ಇಂತಿಷ್ಟು ಶಬ್ದದ ಮಿತಿ ಇರುವ ಪಟಾಕಿಗಳನ್ನೇ ಬಳಸಬೇಕೆಂದು ಸೂಚಿಸಲಾಗಿದೆ.
ಕೀರ್ತಿ ಕುಮಾರ್, ಜಿಲ್ಲಾ ಪರಿಸರ ಅಧಿಕಾರಿ

ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಪಟಾಕಿ ಅಂಗಡಿಗಳಿಗೆ ಕಾಟನ್ ಚೀಲಗಳನ್ನು ನಗರಸಭೆಯ ವತಿಯಿಂದ ವಿತರಿಸಿದ್ದೇವೆ.
ರಾಯಪ್ಪ, ನಗರಸಭೆ ಪೌರಾಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.