ಉಡುಪಿ: ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಹಾಗೂ ಬೀಡಿ ಮತ್ತು ಟೊಬ್ಯಾಕೊ ಲೇಬರ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ ಮಾತನಾಡಿ, ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕಾರ್ಯಸ್ಥಳ ಪರಿಸ್ಥಿತಿಗಳ ಸಂಹಿತೆ (ಒಎಸ್ಎಚ್ಡಬ್ಲ್ಯುಸಿ) 2020ರ ಕುರಿತು ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಚರ್ಚೆಯಾಗಿಲ್ಲ. ಕಾರ್ಮಿಕ ಸಂಘಗಳು ಎತ್ತಿದ ಪ್ರಮುಖ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಅಧಿಸೂಚನೆಗೆ ಮುನ್ನ ಸೇರಿಸಿಕೊಂಡಿಲ್ಲ ಎಂದರು.

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಸಮವರ್ತಿ ಪಟ್ಟಿಯ ಕಾರ್ಮಿಕರ ಕುರಿತ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ಸಿಮೀತಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ವಿರೋಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಚಲಾಯಿಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿಗಳನ್ನು ತಂದು ನಂತರ ನಿಯಮಾವಳಿ ರೂಪಿಸಬೇಕು. ಕರಡು ನಿಯಮಗಳನ್ನು ಕನ್ನಡದಲ್ಲಿ ಪ್ರಕಟಿಸಿ ನಂತರ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಕೂಡಲೇ ಕನಿಷ್ಠ ವೇತನ ಅಧಿಸೂಚನೆ ಹೋರಡಿಸಬೇಕು ಎಂದು ಅವರು ಆಗ್ರಹಿಸಿದರು.

ಕಾರ್ಮಿಕ ಅಧಿಕಾರಿಗಳು ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಆಕ್ಷೇಪಣೆ ಪತ್ರ ಸಲ್ಲಿಸಲಾಯಿತು. ಉಡುಪಿ ಬೀಡಿ ಆ್ಯಂಡ್ ಟೊಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಮುಖಂಡರಾದ ವಸಂತಿ, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಸ್ ನಾಯಕ್, ಪ್ರಮುಖರಾದ ಶಶಿಧರ್ ಗೊಲ್ಲ, ದಯಾನಂದ ಕೊಟ್ಯಾನ್, ವಾಮನ ಬಂಗೇರ, ಸರೋಜ ಎಸ್., ದಯಾನಂದ ಅಮೀನ್, ರಾಮ ಕಾರ್ಕಡ, ನಾಗರಾಜ ಸಾಲಿಗ್ರಾಮ, ಮುರಳಿ, ರಮೇಶ್, ಶ್ರೀಧರ ಶೆಟ್ಟಿ, ಅಶೋಕ, ರಂಗನಾಥ, ಚಂದ್ರಯ್ಯ ಪೂಜಾರಿ, ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.