ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಜಮಾಡಿ ಟೋಲ್ ವಿನಾಯಿತಿ ಮುಂದುವರಿಸಲು ಆಗ್ರಹ ಹಕ್ಕೊತ್ತಾಯ

Published 24 ಮೇ 2024, 14:21 IST
Last Updated 24 ಮೇ 2024, 14:21 IST
ಅಕ್ಷರ ಗಾತ್ರ

ಪಡುಬಿದ್ರಿ: ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ನೀಡಿರುವ ಟೋಲ್ ವಿನಾಯಿತಿ ರದ್ದುಪಡಿಸಿರುವುದನ್ನು ವಿರೋಧಿಸಿ ಹೆಜಮಾಡಿ ಟೋಲ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಟೋಲ್ ಮುಂಭಾಗದಲ್ಲಿ ಶುಕ್ರವಾರ ಹಕ್ಕೊತ್ತಾಯ ಸಭೆ ನಡೆಯಿತು.

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2016ರಿಂದ ಹೆಜಮಾಡಿ ಟೋಲ್ ಪ್ಲಾಝಾ ಕಾರ್ಯಚರಿಸುತ್ತಿದೆ. ಇಲ್ಲಿ ರಸ್ತೆ ಅಭಿವೃದ್ಧಿಯ ವೇಳೆ ಈ ಭಾಗದ ಜನರು ತಮ್ಮ ಮನೆ–ಭೂಮಿಯನ್ನು ಕಳೆದುಕೊಂಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ 2016ರಲ್ಲಿ ನಡೆದ ಸಭೆಯಂತೆ ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಹಾಗೂ ಸಾಸ್ತಾನದಲ್ಲಿ ಕೋಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ವಾಹನಗಳಿಗೆ ಉಚಿತ ಪ್ರಯಾಣಕ್ಕೆ ಆದೇಶ ನೀಡಲಾಗಿತ್ತು.

ಆದರೆ, ಇದೀಗ ಏಕಾಏಕಿ ಸ್ಥಳೀಯ ವಾಹನಗಳ ಫಾಸ್ಟ್‌ಟ್ಯಾಗ್‌ನಿಂದ ಹಣ ಕಡಿತಗೊಳಿಸುವ ಮೂಲಕ ಟೋಲ್ ವಿನಾಯಿತಿ ರದ್ದುಪಡಿಸಿರುವುದು ತಿಳಿದುಬಂದಿದೆ. ಕೂಡಲೇ ಈ ವಿನಾಯಿತಿಯನ್ನು ಪಡುಬಿದ್ರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ಮತ್ತೆ ಮುಂದುವರಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಲಾಯಿತು. ಒಂದು ವೇಳೆ ವಿನಾಯಿತಿ ಮುಂದುವರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಟೋಲ್ ಪ್ರಬಂಧಕ ತಿಮ್ಮಯ್ಯ, ‘ಸಾಸ್ತಾನ, ಹೆಜಮಾಡಿ ಟೋಲ್ ಸಮಸ್ಯೆಯ ಇತ್ಯರ್ಥಕ್ಕೆ ಮುಂದಿನ ವಾರದಲ್ಲಿ ಜಿಲ್ಲಾಧಿಕಾರಿ ಸಭೆಯನ್ನು ಕರೆಯಲಿದ್ದಾರೆ. ಅಲ್ಲಿವರೆಗೆ ಸ್ಥಳೀಯರಿಗಿದ್ದ ವಿನಾಯಿತಿ ಯಥಾಸ್ತಿತಿ ಮುಂದುವರಿಸಲಾಗುವುದು’ ಎಂದರು.

ಸಮಿತಿಯ ಅಧ್ಯಕ್ಷ ಶೇಖರ್ ಹೆಜಮಾಡಿ, ಗೌರವಾಧ್ಯಕ್ಷ ಶೇಖಬ್ಬ ಕೋಟೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಪಡುಬಿದ್ರಿ, ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಷ್ಮಾ ಎ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಪ್ರಮುಖರಾದ ನವೀನ್‌ಚಂದ್ರ ಜೆ ಸುವರ್ಣ, ನವೀನ್‌ಚಂದ್ರ ಜೆ ಶೆಟ್ಟಿ, ವೈ.ಸುಕುಮಾರ್, ಶಶಿಕಾಂತ್ ಪಡುಬಿದ್ರಿ, ಗುಲಾಂ ಮುಹಮ್ಮದ್, ಅಬ್ದುಲ್ ಅಝೀಜ್ ಹೆಜಮಾಡಿ, ವಿಶ್ವಾಸ್ ವಿ ಅಮೀನ್, ಸುಧಾಕರ ಶೆಟ್ಟಿ, ರಾಲ್ಫಿ ಡಿ.ಕೋಸ್ತ, ರವಿ ಎಚ್ ಕುಂದರ್, ನಿರ್ಮಲಾ, ಸೈಯ್ಯದ್ ನಿಝಾಮ್, ಉಮನಾಥ್ ಪಡುಬಿದ್ರಿ, ದಿನೇಶ್ ಫಲಿಮಾರು, ಜಿತೇಂದ್ರ ಪುರ್ಟಾಡೊ, ಮಧು ಆಚಾರ್ಯ, ಅಬ್ದುಲ್ ರಹ್ಮಾನ್ ಕಣ್ಣಂಗಾರ್, ಸುಧೀರ್ ಕರ್ಕೇರ, ಪ್ರಾಣೇಶ್ ಹೆಜ್ಮಾಡಿ, ಪಾಂಡುರಂಗ ಕರ್ಕೇರ, ರಮೀಜ್ ಹುಸೇನ್, ಲೋಕೇಶ್ ಅಮೀನ್, ತಸ್ನೀನ್ ಅರಾ, ಶರ್ಪುದ್ದೀನ್ ಶೇಕ್, ಅಶೋಕ್ ಸಾಲ್ಯಾನ್, ಮೋಹನ್, ಕೇಶವ್ ಸಾಲ್ಯಾನ್ ಹೆಜಮಾಡಿ, ಸನಾ ಇಬ್ರಾಹಿಮ್, ಹಸನ್ ಕೋಡಿ, ದೀಪಕ್ ಕೋಟ್ಯಾನ್ ಹೆಜಮಾಡಿ, ಅಬ್ಬಾಸ್ ಹಾಜಿ, ಎಂ.ಎಸ್.ಶಾಫಿ, ರೋಶನ್ ಕಾಂಚನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT