ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣವನ್ನು ನೆಲಸಮಗೊಳಿಸುವ ಕಾರ್ಯಾಚರಣೆ ಆರಂಭಗೊಂಡಿದೆ.

ಹಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದ್ದ ಈ ಕಟ್ಟಡವನ್ನು ತೆರವುಗೊಳಿಸಿ ಆ ಜಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಗೊಳ್ಳಲಿದೆ ಎಂದು ನಗರಸಭೆಯ ಮೂಲಗಳು ತಿಳಿಸಿವೆ.

ಸುಮಾರು 8 ವರ್ಷಕ್ಕೂ ಅಧಿಕ ಕಾಲದಿಂದ ಶಿಥಿಲಾವಸ್ಥೆಯಲ್ಲಿದ್ದ ಈ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ನೆಲಸಮಗೊಳಿಸುವಂತೆ ಲೋಕೋಪಯೋಗಿ ಇಲಾಖೆಯು ನಗರಸಭೆಗೆ ಸೂಚನೆ ನೀಡಿತ್ತು. ಅದಕ್ಕಾಗಿ ಎರಡು ವರ್ಷಗಳ ಹಿಂದೆಯೇ ಪ್ರಕ್ರಿಯೆ ಆರಂಭವಾಗಿತ್ತಾದರೂ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ ಎಂದೂ ಹೇಳಿವೆ.

ಈ ಕಟ್ಟಡದಲ್ಲಿದ್ದ ಚಿನ್ನದಂಗಡಿ, ಬೇಕರಿ, ಹೂವಿನ ಅಂಗಡಿ, ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ. ಬುಲ್ಡೋಜರ್ ಬಳಸಿ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ಕಟ್ಟಡದ ಸಮೀಪದಲ್ಲಿರುವ ಸಾವಿರಾಳು ಧೂಮಾವತಿ ದೈವಸ್ಥಾನವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ನಗರಸಭೆ ಮೂಲಗಳು ತಿಳಿಸಿವೆ.

ನಗರದಲ್ಲಿ ಸಮರ್ಪಕ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ನಗರಸಭೆ ಅಧಿಕಾರಿಗಳು ಹಿಂದಿನಿಂದಲೂ ಹೇಳುತ್ತಿದ್ದರು.

ವಿಶ್ವೇಶ್ವರಯ್ಯ ಕಟ್ಟಡದ ಜಾಗವು ಕೃಷ್ಣಮಠ ಸರ್ವಿಸ್ ಬಸ್ ನಿಲ್ದಾಣಕ್ಕೆ ಹತ್ತಿರವಿರುವುದರಿಂದ ಅಲ್ಲಿ ಎಲ್ಲಾ ವಿಧದ ಅಂಗಡಿಗಳಿರುವ ವಾಣಿಜ್ಯ ಸಂಕೀರ್ಣ ನಿರ್ಮಿಸಿದರೆ ಜನರಿಗೆ ಅನುಕೂಲವಾಗಲಿದೆ
ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ

ಹೊಸ ಕಟ್ಟಡ ನಿರ್ಮಾಣವಾದರೆ ಸರ್ವಿಸ್ ಬಸ್ ನಿಲ್ದಾಣ ಪರಿಸರದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಸಿಗಬಹುದೆಂಬ ನಿರೀಕ್ಷೆಯಲ್ಲಿ ನಗರವಾಸಿಗಳಿದ್ದಾರೆ.

‘ಯೋಜನೆ ಅಂತಿಮವಾಗಿಲ್ಲ’

ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣದ ನೆಲಸಮ ಕಾರ್ಯಾಚರಣೆ ಮುಗಿದ ಬಳಿಕ ಚರ್ಚಿಸಿ ನೂತನ ಕಟ್ಟಡದ ಯೋಜನೆ ಸಿದ್ಧಪಡಿಸಲಾಗುವುದು. ನೂತನವಾಗಿ ಬಹು ಮಹಡಿಯ ಕಟ್ಟಡ ನಿರ್ಮಿಸಿ ಅದರಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸುವ ಚಿಂತನೆ ಇದೆ. ಆದರೆ ಯೋಜನೆ ಇನ್ನೂ ಅಂತಿಮಗೊಂಡಿಲ್ಲ ಎಂದು ನಗರಸಭೆಯ ಪೌರಾಯುಕ್ತ ಮಹಾಂತೇಶ ಹಂಗರಗಿ ತಿಳಿಸಿದರು.

ಬಹು ಮಹಡಿಯ ಕಟ್ಟಡ ನಿರ್ಮಿಸಿ ಅದರಲ್ಲಿ ಮೂರು ಅಂತಸ್ತನ್ನು ವಾಹನ ಪಾರ್ಕಿಂಗ್ಗೆ ಮೀಸಲಿರಿಸಿ ಉಳಿದ ಮಹಡಿಗಳನ್ನು ಅಂಗಡಿಗಳಿಗೆ ನೀಡುವ ಚಿಂತನೆ ಇದೆ. ಹಳೆಯ ತಾಲ್ಲೂಕು ಕಚೇರಿಯ ಜಾಗದಲ್ಲಿ ನಗರಸಭೆಯ ನೂತನ ಕಟ್ಟಡ ನಿರ್ಮಾಣಗೊಳ್ಳಲಿದ್ದು ಈಚೆಗೆ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.