ಕುಂದಾಪುರ (ಉಡುಪಿ): ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಹಾಕಿದ ಆರೋಪದಡಿ ಸೌದಿ ಅರೆಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕುಂದಾಪುರ ತಾಲ್ಲೂಕಿನ ಕೋಟೇಶ್ವರದ ಬೀಜಾಡಿಯ ಹರೀಶ್ ಬಂಗೇರ ಆರೋಪಮುಕ್ತರಾಗಿ ಬಿಡುಗಡೆಯಾಗಿದ್ದಾರೆ.

ಮಾಡದ ತಪ್ಪಿಗೆ 20 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ಹರೀಶ್ ಬಂಗೇರ ಬುಧವಾರ ನಸುಕಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭ ಪತ್ನಿ ಹಾಗೂ ಸ್ನೇಹಿತರು ಬರಮಾಡಿಕೊಂಡರು.

ಘಟನೆ ವಿವರ: ಹರೀಶ್ ಬಂಗೇರ ಸೌದಿಯ ಧಮನ್ ಆಲ್ ಹಸಾದ ಕಾರ್ಟೂನ್ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ ಎಸಿ ಮೆಕ್ಯಾನಿಕ್ ಆಗಿ ದುಡಿಯುತ್ತಿದ್ದರು. ಕಿಡಿಗೇಡಿಗಳು ಹರೀಶ್ ಬಂಗೇರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮೆಕ್ಕಾ ವಿರುದ್ಧ ಸಂದೇಶ ಹಾಕಿದ್ದರು. ಈ ಸಂಬಂಧ ಸೌದಿ ಪೊಲೀಸರು ಬಂಗೇರ ಅವರನ್ನು 2019, ಡಿ.22ರಂದು ಬಂಧಿಸಿದ್ದರು.

ಪತಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ ಎಂದು ಪತ್ನಿ ಸಮನಾ ಉಡುಪಿಯ ಸೆನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಮೂಡಬಿದರೆಯ ಅಬ್ದುಲ್ ಹುಯೇಜ್ ಹಾಗೂ ಅಬ್ದುಲ್ ತುಯೇಜ್ ಎಂಬುವರನ್ನು ಬಂಧಿಸಿದ್ದರು.

ಬಳಿಕ ಸೌದಿಯಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಹರೀಶ್ ಬಂಗೇರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸರ್ಕಾರ ಹಾಗೂ ಸಂಘ ಸಂಸ್ಥೆಗಳ ನಿರಂತರ ಪ್ರಯತ್ನದ ಫಲವಾಗಿ ಬಂಗೇರ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ... INDvsENG: ಸಿರಾಜ್ರಂತಹ ಆಕ್ರಮಣಶೀಲತೆ ಗೆಲುವಿಗೆ ಸಹಾಯ ಮಾಡುತ್ತದೆ: ಸಲ್ಮಾನ್ ಬಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.