ಸೋಮವಾರ, ಅಕ್ಟೋಬರ್ 25, 2021
24 °C

ಎಲ್ಲ ದೇವಾಲಯಗಳನ್ನು ಸಕ್ರಮಗೊಳಿಸಿ: ಡಾ.ವೀರೇಂದ್ರ ಹೆಗ್ಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಉಡುಪಿ: ರಾಜ್ಯದಲ್ಲಿರುವ ಎಲ್ಲ ದೇವಾಲಯಗಳನ್ನು ಸಕ್ರಮಗೊಳಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ಶನಿವಾರ ಕುತ್ಪಾಡಿಯಲ್ಲಿ ಮಾತನಾಡಿದ ಅವರು, ‘ದೇವಸ್ಥಾನದ ಆಡಳಿತ ಮಂಡಳಿಗಳು ಕಾನೂನುಬದ್ಧ ದೇವಾಲಯಗಳನ್ನು ಮಾತ್ರ ನಿರ್ಮಾಣ ಮಾಡಬೇಕು. ಸರ್ಕಾರ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿ, ಸದ್ಯ ರಾಜ್ಯದಲ್ಲಿರುವ ಅಕ್ರಮ ದೇವಾಲಯಗಳನ್ನು ಸಕ್ರಮಗೊಳಿಸಬೇಕು. ಈ ಮೂಲಕ ಭಕ್ತರ ಭಾವನೆಗಳಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಯಾವ ದೇವಸ್ಥಾನ ಕೆಡುವುದಿಲ್ಲ: ಧಾರ್ಮಿಕ ಕೇಂದ್ರಗಳ ರಕ್ಷಣೆಗೆ ಸರ್ಕಾರ ದೇವಸ್ಥಾನಗಳ ಸಂರಕ್ಷಣಾ ಕಾಯ್ದೆ (ತಿದ್ದುಪಡಿ) ಜಾರಿಗೆ ತರಲಿದ್ದು, ಮುಂದೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ಕೆಡವುದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಹೆದ್ದಾರಿ ಅಂಚಿನಲ್ಲಿರುವ ದೇವಸ್ಥಾನಗಳ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಮಾಡಲು ಅಧಿಕಾರಿಗಳ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ. ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡದೆ ಅಧಿಕಾರಿಗಳು ಸ್ವಲ್ಪ ತಾಳ್ಮೆ ವಹಿಸಬೇಕಿತ್ತು ಎಂದು ಕೋಟ ಅಭಿಪ್ರಾಯಪಟ್ಟರು.

ಎಲ್ಲ ಧರ್ಮಗಳ ಧಾರ್ಮಿಕ ಕಟ್ಟಡಗಳೂ ಮೌಢ್ಯ ಬಿತ್ತುವ ತಾಣಗಳು: ಮರಿತಿಬ್ಬೇಗೌಡ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು