ಶನಿವಾರ, ಅಕ್ಟೋಬರ್ 24, 2020
28 °C
ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ಸೂಚನೆ

ಡಿಪ್ಲೊಮಾ, ಪಿಜಿಸಿಇಟಿ ಪರೀಕ್ಷೆ: ಸೋಂಕಿತರಿಗೆ ಪ್ರತ್ಯೇಕ ಕೊಠಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಅ.13 ಹಾಗೂ 14ರಂದು ನಡೆಯಲಿರುವ ಡಿಪ್ಲೊಮಾ ಹಾಗೂ ಪಿಜಿಸಿಇಟಿ ಪರೀಕ್ಷೆ ಸಂದರ್ಭ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಡಿಪ್ಲೊಮಾ ಮತ್ತು ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲಾಗಿದೆ. ಅದೇ ಮಾದರಿಯಲ್ಲಿ ಡಿಪ್ಲೊಮಾ ಹಾಗೂ ಪಿಜಿಸಿಇಟಿ ಪರೀಕ್ಷೆಯನ್ನು ನಡೆಸಬೇಕು. ಪರೀಕ್ಷಾ ಕೇಂದ್ರದ ಹೊರಭಾಗದಲ್ಲಿ ಹಾಗೂ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ಎಚ್ಚರವಹಿಸಬೇಕು ತಿಳಿಸಿದರು.

ವಿದ್ಯಾರ್ಥಿಗಳ ದೇಹದ ಉಷ್ಣಾಂಶವನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಿದ ಬಳಿಕವೇ ಪರೀಕ್ಷಾ ಕೇಂದ್ರದೊಳಗೆ ಬಿಡಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರವಹಿಸಬೇಕು ಎಂದರು.

ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೇಂದ್ರಗಳನ್ನು ಗುರುತಿಸಬೇಕು. ಸೋಂಕಿತ ವಿದ್ಯಾರ್ಥಿಗಳು ದೂರವಾಣಿ: 0820-2574802 ಹಾಗೂ ಟೋಲ್ ಫ್ರೀ ಸಂಖ್ಯೆ 1077ಕ್ಕೆ ಕರೆ ಮಾಡಿದರೆ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ  ಮಾಡಲಾಗುವುದು ಎಂದರು.

ಸೋಂಕಿತರು ಪರೀಕ್ಷೆ ಬರೆಯುವ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದರ ಜತೆಗೆ ಜಿಲ್ಲಾ ಆರೋಗ್ಯ ಪ್ರಾಧಿಕಾರದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳನ್ನು ಸೋಂಕು ನಿವಾರಣಾ ದ್ರಾವಣದಿಂದ ಶುಚಿಗೊಳಿಸಬೇಕು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ, ತಹಶೀಲ್ದಾರ್ ಪ್ರದೀಪ್‌ ಎಸ್‌.ಕುರ್ಡೇಕರ್, ಖಜಾನೆ ಇಲಾಖೆ ಉಪ ನಿರ್ದೇಶಕ ಗೋಪಾಲಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.