ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜಿರೆ: ಜಿಲ್ಲೆಗೊಂದು ವಿಪತ್ತು ನಿರ್ವಹಣಾ ಸೇವಾ ಪಡೆ

Last Updated 19 ಆಗಸ್ಟ್ 2020, 15:25 IST
ಅಕ್ಷರ ಗಾತ್ರ

ಉಜಿರೆ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ)ಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣಾ ಸೇವಾ ಪಡೆ ಆರಂಭಿಸಲಾಗುವುದು’ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

‘ಆಪತ್ಕಾಲದಲ್ಲಿ ನಮ್ಮನ್ನು ಹಾಗೂ ನಮ್ಮ ಊರನ್ನು ನಾವೇ ಕಾಪಾಡಬೇಕು. ಈ ಉದ್ದೇಶದಿಂದ ಪ್ರಾರಂಭಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಯೋಜನೆಯ ಜನಜಾಗೃತಿ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್, ‘ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಗುರುವಾಯನಕೆರೆ ಹಾಗೂ ಧಾರವಾಡ ಜಿಲ್ಲೆಯ ಧಾರವಾಡ ಮತ್ತು ನವಲಗುಂದದಲ್ಲಿ 4 ಘಟಕಗಳನ್ನು ಪ್ರಾರಂಭಿಸಿದ್ದು, 307 ಸ್ವಯಂಸೇವಕರನ್ನು ತರಬೇತುಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗುವುದು. ಈ ತಂಡವು ಪ್ರಾಕೃತಿಕ ವಿಕೋಪ, ಸಾಂಕ್ರಾಮಿಕ ರೋಗ ಮತ್ತಿತರ ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸಿ ಸಕಾಲಿಕ ನೆರವು ನೀಡಲಿದೆ’ ಎಂದು ಅವರು ವಿವರಿಸಿದ್ದಾರೆ.

‘ಸೇವಾ ಪಡೆಯ ಸ್ವಯಂಸೇವಕರಿಗೆ ತರಬೇತಿ, ಸಮವಸ್ತ್ರ, ರಕ್ಷಣಾ ಪರಿಕರಗಳು ಹಾಗೂ ತುರ್ತು ಕಾರ್ಯಾಚರಣೆಗಾಗಿ ₹30 ಲಕ್ಷ ಮೀಸಲಿಡಲಾಗಿದೆ’ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT