ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛ ವಿದ್ಯಾಲಯ ಪುರಸ್ಕಾರ ಎಲ್ಲ ಶಾಲೆಗಳಿಗೆ ಸಿಗಲಿ

ಸ್ವಚ್ಛತೆಗೆ ಆದ್ಯತೆ ನೀಡಿದರೆ ಸ್ವಸ್ಥ ಸಮಾಜ ನಿರ್ಮಾಣ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ
Last Updated 28 ಜೂನ್ 2022, 13:03 IST
ಅಕ್ಷರ ಗಾತ್ರ

ಉಡುಪಿ: ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಸ್ವಸ್ಥ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಸಂಸ್ಥೆಯ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸುತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಆದ್ಯತೆಯ ಕಾರ್ಯವಾಗಬೇಕು.ದೈನಂದಿನ ಚಟುವಟಿಕೆಗಳು ಪರಿಸರಕ್ಕೆ ಪೂರಕವಾಗಿರಬೇಕು. ಫಲಾಪೇಕ್ಷೆಯಿಲ್ಲದೆ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿದರೆ ಪ್ರತಿಫಲ ಖಚಿತವಾಗಿ ಸಿಗಲಿದೆ. ಸ್ವಚ್ಛತಾ ಕಾರ್ಯಗಳ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು.‘

ಕೇಂದ್ರ ಸರ್ಕಾರದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮವನ್ನು ಶಾಲಾ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಿ ಪರಿಸರ ಸ್ವಚ್ಛವಾಗಿರಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಾಮರ್ಥ್ಯ ಹಾಗೂ ಶುಚಿತ್ವ ಗುಣಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಪ್ರಸ್ತುತ ಸಾಲಿನ ಪುರಸ್ಕಾರಕ್ಕೆ ಜಿಲ್ಲೆಯ 1,168 ಶಾಲಾ ಕಾಲೇಜುಗಳಲ್ಲಿ 729 ಶಾಲೆಗಳು ನೋಂದಾಯಿಸಿದ್ದು, 627 ಶಾಲೆಗಳು ಆನ್‌ಲೈನ್‌ನಲ್ಲಿ ಶಾಲೆಯ ಕಾರ್ಯ ಸಾಧನೆಯ ಮಾಹಿತಿ ದಾಖಲಿಸಿದ್ದವು. ಜಿಲ್ಲಾ ಮಟ್ಟದ ಸಮಿತಿಯು ಸರ್ಕಾರದ ಮಾನದಂಡದನ್ವಯ 38 ಶಾಲೆಗಳನ್ನು ಆಯ್ಕೆಮಾಡಿವೆ. ಮುಂದೆ, ಜಿಲ್ಲೆಯ ಪ್ರತಿ ಶಾಲೆಯೂ ಸ್ವಚ್ಛ ವಿದ್ಯಾಲಯ ಪುರಸ್ಕಾರ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಚಂದ್ರಾ ನಾಯಕ್ ಸ್ವಾಗತಿಸಿ , ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT