ಗುರುವಾರ , ಫೆಬ್ರವರಿ 20, 2020
20 °C
ಕೃಷಿ ತಜ್ಞರಿಂದ ವಿಚಾರಗೋಷ್ಠಿ, ವಿಚಾರ ವಿನಿಮಯ

ಕುಂದಾಪುರದಲ್ಲಿ ಜಿಲ್ಲಾ ರೈತ ಸಮ್ಮೇಳನ 14ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಭಾರತೀಯ ಕಿಸಾನ್ ಸಂಘದಿಂದ ಡಿ.14ರಂದು ಬೆಳಿಗ್ಗೆ 9ರಿಂದ ಕುಂದಾಪುರ ವ್ಯಾಸರಾಜ ಕಲಾ ಮಂದಿರದಲ್ಲಿ ಉಡುಪಿ ಜಿಲ್ಲಾ ರೈತ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ತಿಳಿಸಿದರು.

ಮಂಗಳವಾರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೃಷಿಕ ವರ್ಗವನ್ನು ಸಂಘಟಿಸುವ, ಸಂಘಟಿತ ಕೃಷಿಕರಿಗೆ ಕೃಷಿ ಕ್ಷೇತ್ರದ ಸಾಧಕರು, ಚಿಂತಕರು, ಸಂಘಟಕರಿಂದ ಮಾರ್ಗದರ್ಶನ ನೀಡುವ ಸಲುವಾಗಿ ರೈತ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.

ಅಂದಿನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್, ಉದ್ಘಾಟಿಸಲಿದ್ದಾರೆ. ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಐ.ಎನ್‌.ಬಸವೇಗೌಡ ಅಧ್ಯಕ್ತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಸಿಪಿಸಿಆರ್‌ಐ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಅನಿತಾ ಕರುಣ್‌, ಜಿಲ್ಲಾ ಹಾಪ್‌ಕಾಮ್ಸ್‌ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ ಭಾಗವಹಿಸಲಿದ್ದಾರೆ.

ತೆಂಗಿನ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಕುರಿತು ಹಿರಿಯ ವಿಜ್ಞಾನಿ ಡಾ.ಕೆ.ಬಿ.ಹೆಬ್ಬಾರ್, ಸಾವಯವ ಕೃಷಿಯಲ್ಲಿ ರೈತನ ಭವಿಷ್ಯ ಕುರಿತು ರಾಜ್ಯ ಸಾವಯವ ಕೃಷಿ ಮಿಷನ್ ಅಧ್ಯಕ್ಷ ಆನಂದ, ಕೃಷಿಯಲ್ಲಿ ವೈಜ್ಞಾನಿಕತೆ, ಯಾಂತ್ರೀಕರಣ ಕುರಿತು ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್‌ಚಂದ್ರ ಶೆಟ್ಟಿ, ಪಶ್ಚಿಮಘಟ್ಟದ ಸಸ್ಯವೈವಿಧ್ಯಗಳ ಅಳಿವು ಉಳಿವು ಕುರಿತು ಪರಿಸರ ತಜ್ಞ ಎಂ.ದಿನೇಶ್ ನಾಯಕ್ ವಿಚಾರ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.‌

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನವೀನ್‌ ಚಂದ್ರ ಜೈನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ವಿ.ಪೂಜಾರಿ, ಉಪಾಧ್ಯಕ್ಷ ರಾಮಚಂದ್ರ ಅಲ್ಸೆ, ಶ್ರೀನಿವಾಸ್‌ ಭಟ್‌, ಕುಂದಾಪುರ ಅಧ್ಯಕ್ಷ ಸೀತಾರಾಮ ಗಾಣಿಗ, ಉಡುಪಿ ಅಧ್ಯಕ್ಷ ಪಾಂಡುರಂಗ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಆಸ್ತಿಕ ಶಾಸ್ತ್ರಿ, ಚಂದ್ರಹಾಸ ಶೆಟ್ಟಿ, ರಾಜೀವ್ ಶೆಟ್ಟಿ, ಮಹಾಬಲ ಬಾಯರಿ, ಸುಂದರ ಶೆಟ್ಟಿ, ಕೆ.ಪಿ.ಭಂಡಾರಿ, ಸದಾನಂದ ಶೆಟ್ಟಿ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು