ಉಡುಪಿ: ಜಿಲ್ಲೆಯಲ್ಲಿ ಜುಲೈ 4 ರಿಂದ 14 ರವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇ.ಡಿ ಹಾಗೂ ಡಿ.ಪಿ.ಎಸ್.ಇ ಪರೀಕ್ಷೆಗಳು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್) ನಡೆಯಲಿದ್ದು, ಪರೀಕ್ಷೆ ಮುಗಿಯುವವರೆಗೂ ಪರೀಕ್ಷಾ ಕೇಂದ್ರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶಿಸಿದ್ದಾರೆ.

ಚುನಾವಣಾಧಿಕಾರಿಗಳ ನೇಮಕ

ಉಡುಪಿ: ಬ್ರಹ್ಮಾವರ ತಾಲ್ಲೂಕು ಹೆಗ್ಗುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸಲು ಬ್ರಹ್ಮಾವರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಉಪ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸಲು ಕೊಕ್ಕರ್ಣೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದೇವೇಂದ್ರ ಕೆ. ಮೋಗೆರ, ನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸಲು ಸೈಬ್ರಕಟ್ಟೆ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್.ಕೋಡೋಂಜಿ, ಕುಂದಾಪುರ ತಾಲ್ಲೂಕು ಅಂಪಾರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸಲು ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್ ಹಾಗೂ ಬೈಂದೂರು ತಾಲ್ಲೂಕು ಕಾಲ್ತೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸಲು ಸಹಾಯಕ ಕೃಷಿ ಅಧಿಕಾರಿ ಪರಶುರಾಮ ಎಂ.ಮುತ್ತಪ್ಪಗೋಳ ಅವರನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಆದೇಶಿಸಿದ್ದಾರೆ.

ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 8 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ ಸಂಪರ್ಕಿಸಬಹುದು. ಸಹಾಯವಾಣಿ 8277799990, ಉಡುಪಿ 0820-2574596, ಕಾರ್ಕಳ: 08258-231101 ಹಾಗೂ ಕುಂದಾಪುರ: 08254-230370 ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.

ಕೃಷಿ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಭತ್ತದ ಬೆಳೆ ಸ್ಪರ್ಧೆಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಬೆಳೆ ಸ್ಫರ್ಧೆ ನಡೆಸಿ ಪ್ರತಿ ಹಂತದಲ್ಲಿ 3 ಬಹುಮಾನ ನೀಡಲಾಗುತ್ತಿದ್ದು, ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ರೈತರ ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಫರ್ಧೆಗೆ ನಿಗದಿತ ಪ್ರವೇಶ ಶುಲ್ಕ ಪಾವತಿಸಿ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳೊಂದಿಗೆ ಆ.31ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸುವಿಧಾ ತಂತ್ರಾಂಶದ ಮೂಲಕ ಪ್ರವರ್ಗ-1ರ ಉಪ್ಪಾರ ಮತ್ತು ಉಪ ಜಾತಿಗೆ ಸೇರಿದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆ.12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಣಿಪಾಲ, ಸಹಾಯವಾಣಿ 7026288888, 0820-2574882 ಸಂಪರ್ಕಿಸಬಹುದು.

ವಿದ್ಯಾರ್ಥಿ ನಿಲಯ ಪ್ರವೇಶ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ಮಣಿಪಾಲದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ಸೀಟು ಹಂಚಿಕೆಯಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ 0820-2574596, 0820-2573596, ಕಾರ್ಕಳ: 08258-231101, ಕುಂದಾಪುರ: 08254-230370 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.