ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಕಾರು ಅಪಘಾತದಲ್ಲಿ ಕೆಎಂಸಿ ವೈದ್ಯ ಸಾವು

Published 1 ಜುಲೈ 2023, 15:50 IST
Last Updated 1 ಜುಲೈ 2023, 15:50 IST
ಅಕ್ಷರ ಗಾತ್ರ

ಉಡುಪಿ: ಶನಿವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಮಣಿಪಾಲದ ಕೆಎಂಸಿಯ ವೈದ್ಯ ಡಾ.ಸೂರ್ಯನಾರಾಯಣ (26) ಮೃತಪಟ್ಟಿದ್ದಾರೆ.

ಮಣಿಪಾಲದ ಹೋಟೆಲ್ ಹಾಟ್ ಅಂಡ್ ಸ್ಪೈಸಿ ಎದುರುಗಡೆಯ ತಿರುವಿನಲ್ಲಿ ಕಾರು ರಸ್ತೆ ವಿಭಜಕೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಘಟನೆಯಲ್ಲಿ ಸೂರ್ಯನಾರಾಯಣ ಅವರ ತಲೆಗೆ ಗಂಭೀರ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಮಣಿಪಾಲ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮಣಿಪಾಲದಲ್ಲಿ ಶನಿವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ದೃಶ್ಯ
ಮಣಿಪಾಲದಲ್ಲಿ ಶನಿವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT