ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಕರೆ
Published : 2 ಅಕ್ಟೋಬರ್ 2024, 3:11 IST
Last Updated : 2 ಅಕ್ಟೋಬರ್ 2024, 3:11 IST
ಫಾಲೋ ಮಾಡಿ
Comments

ಉಡುಪಿ: ಪ್ರತಿ ಹನಿ ರಕ್ತವೂ ಮೌಲ್ಯಯುತವಾಗಿದ್ದು, ಪ್ರತಿಯೊಬ್ಬ ಅರ್ಹರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.

ಮಣಿಪಾಲದ ಎಂ.ಐ.ಎ.ಎಂ.ಎಸ್ ಬುದ್ಧ ಆಯುರ್ವೇದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಉಡುಪಿ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್, ಶ್ರೀ ಆದರ್ಶ ಕಾಲೇಜ್ ಆಫ್ ಅಲೈಡ್ ಆ್ಯಂಡ್ ಪ್ಯಾರಾಮೆಡಿಕಲ್ ಸೈನ್ಸ್ ಮತ್ತು ಎಚ್.ಪಿ.ಆರ್. ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆ್ಯಂಡ್‌ ಪ್ಯಾರಾಮೆಡಿಕಲ್ ಸೈನ್ಸ್ ಮಣಿಪಾಲ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಅನೇಕರು ಸರಿಯಾದ ಸಮಯದಲ್ಲಿ ರಕ್ತ ಸಿಗದೆ ಪ್ರಾಣ ಕಳೆದುಕೊಳ್ಳುತ್ತಾರೆ. ಆಪತ್ತಿನಲ್ಲಿರುವವರ ಅಮೂಲ್ಯವಾದ ಜೀವವನ್ನು ರಕ್ತದಾನದ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ರಕ್ತದಾನಿಯನ್ನು ಗುರುತಿಸಿ ಸನ್ಮಾನಿಸುವ ಮೂಲಕ ಅವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದರು.

ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಅಭ್ಯಾಸವನ್ನು ಕಾಲೇಜು ಹಂತದಿಂದಲೇ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿದರು.  ಹೆಚ್ಚು ಬಾರಿ ರಕ್ತದಾನ ಮಾಡಿದ ಅನಿತಾ ಡಿ ಸೋಜಾ, ಮೋಹಿತ್ ಪೆರ್ಡೂರು, ಸ್ವೀಟಿ ಜೆ.ಫರ್ನಾಂಡಿಸ್, ದಿನೇಶ್ ಕಾಂಚನ್, ಸುಕೇಶ್ ಖಾರ್ವಿ ಮತ್ತು ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

175 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಜಿಲ್ಲಾ ವೈದ್ಯಾಧಿಕಾರಿ ಡಾ.ಐ.ಪಿ.ಗಡಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಅಶೋಕ್, ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ, ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನ ಕಾಲೇಜಿನ ಪ್ರಾಂಶುಪಾಲರಾದ ಸುದಿನ ಎಂ., ಶ್ರೀ ಆದರ್ಶ ಕಾಲೇಜ್ ಆಫ್ ಅಲೈಡ್ ಆ್ಯಂಡ್ ಪ್ಯಾರಾಮೆಡಿಕಲ್ ಸೈನ್ಸ್‌ನ ಪ್ರಾಂಶುಪಾಲ ಪ್ರೊ.ರವಿಕುಮಾರ್ ಟಿ.ಎನ್, ಎಚ್.ಪಿ.ಆರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆ್ಯಂಡ್ ಪ್ಯಾರಾಮೆಡಿಕಲ್ ಸೈನ್ಸ್‌ನ ಪ್ರಾಂಶುಪಾಲರಾದ  ದಿವ್ಯಾಶ್ರೀ, ಉದಯಕುಮಾರ, ರಘುನಾಥ ನಾಯಕ್,  ನವನೀತ ಕೆ.ಪಿ ಭಾಗವಹಿಸಿದ್ದರು.

ಮಹಾಬಲೇಶ್ವರ ಬಿ.ಎಂ.ಸ್ವಾಗತಿಸಿದರು. ಡಾ.ಆಶಿತ ಆರ್.ನಿರೂಪಿಸಿದರು. ಡಾ.ಮಾಧವಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT