ಮಂಗಳವಾರ, ನವೆಂಬರ್ 24, 2020
22 °C
462 ಎಂಡಿಎಂಎ ಮಾತ್ರೆ, 14 ಗ್ರಾಂ ಹೈಡ್ರೋವೀಡ್ ಪತ್ತೆ

ಉಡುಪಿ: ₹ 14,70 ಲಕ್ಷ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಗರದಲ್ಲಿ ಗುರುವಾರ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ 244 ಗ್ರಾಂನ 462 ಎಂಡಿಎಂಎ ಮಾತ್ರೆಗಳು ಹಾಗೂ 14 ಗ್ರಾಂ ವಿದೇಶಿ ಹೈಡ್ರೋವೀಡ್ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ₹ 14,70 ಲಕ್ಷ ಎಂದು ಅಂದಾಜಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಹಿಂದೆ ದಾಖಲಾಗಿದ್ದ ಗಾಂಜಾ ಪ್ರಕರಣಗಳ ತನಿಖೆಯ ವೇಳೆ ಸಿಕ್ಕ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. 2 ತಿಂಗಳಲ್ಲಿ ಐದನೇ ಬಾರಿ ವಿದೇಶದಿಂದ ಆಮದಾದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ವಿಷ್ಣುವರ್ಧನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಕಾರ್ಕಳ ಡಿವೈಎಸ್‌ಪಿ ಭರತ್ ಎಸ್.ರೆಡ್ಡಿ, ಮಣಿಪಾಲ ಇನ್‌ಸ್ಪೆಕ್ಟರ್ ಮಂಜುನಾಥ್ ಎಂ.ಗೌಡ ನೇತೃತ್ವದ ತಂಡದಲ್ಲಿ ಸಹಾಯಕ ಡ್ರಗ್ ಕಂಟ್ರೋಲರ್ ನಾಗರಾಜ್, ಅಧಿಕಾರಿಗಳಾದ ಶಂಕರ್, ಪ್ರದೀಪ್ ಕುಮಾರ್, ಮಣಿಪಾಲ ಠಾಣೆಯ ಆದರ್ಶ, ದಯಾಕರ್ ಪ್ರಸಾದ್, ಶುಭಾ, ಆನಂದಯ್ಯ, ಸುದೀಪ್, ಜಗದೀಶ್ ಕಾರ್ಯಾಚರಣೆಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು