ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಈಸ್ಟರ್ ಜಾಗರಣೆಯಲ್ಲಿ ಯೇಸುವಿನ ಸ್ಮರಣೆ

ಬೃಹತ್ ಕ್ಯಾಂಡಲ್‌ ಮೆರವಣಿಗೆ: ಹಬ್ಬದ ಶುಭಾಶಯ ವಿನಿಮಯ
Last Updated 8 ಏಪ್ರಿಲ್ 2023, 15:43 IST
ಅಕ್ಷರ ಗಾತ್ರ

ಉಡುಪಿ: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನವನ್ನು ಸ್ಮರಿಸುವ ಈಸ್ಟರ್ ಜಾಗರಣೆಯನ್ನು ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಈಸ್ಟರ್ ಜಾಗರಣೆಯ ಧಾರ್ಮಿಕ ವಿಧಿವಿಧಾನಗಳು ನಡೆದವು.

ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರು ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ಜೋಯ್‌ ಅಂದ್ರಾದೆ, ಪಿಲಾರ್ ಸಭೆಯ ಡೆಂಜಿಲ್ ಮಾರ್ಟಿಸ್, ನಿತೇಶ್ ಡಿಸೋಜ ಇದ್ದರು.

ಬೃಹತ್‌ ಗಾತ್ರದ ಈಸ್ಟರ್‌ ಕ್ಯಾಂಡಲ್‌ ಅನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಬಳಿಕ ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು. ಧರ್ಮಾಧ್ಯಕ್ಷರು ಮತ್ತು ಧರ್ಮಗುರುಗಳು ಆಶೀರ್ವಚನ ನೆರವೇರಿಸಿ ನೀರನ್ನು ಭಕ್ತರ ಮೇಲೆ ಪ್ರೋಕ್ಷಿಸಿ ಆಶೀರ್ವದಿಸಿದರು.

ಬಳಿಕ ನಡೆದ ಬಲಿಪೂಜೆಯಲ್ಲಿ ಯೇಸು ಎದುರಿಸಿದ ಕಷ್ಟ ಕಾರ್ಪಣ್ಯಗಳನ್ನು ಸ್ಮರಿಸಲಾಯಿತು. ಬಳಿಕ ಪುನರುತ್ಥಾನದ ಸಂದೇಶವನ್ನು ವಿವರಿಸಿದ ಧರ್ಮಗುರುಗಳು, ವಿಶ್ವಾಸ, ಸತ್ಯದ ಮರು ದೃಡೀಕರಣ ನಡೆಸಿದರು. ಬಲಿಪೂಜೆಯ ಬಳಿಕ ಭಾಗವಹಿಸಿದ ಕ್ರೈಸ್ತರು ಈಸ್ಟರ್ ಹಬ್ಬದ ಶುಭಾಶಯ ಮಾಡಿಕೊಂಡು ಸಂಭ್ರಮಿಸಿದರು.

ಕ್ರೈಸ್ತರು ವಿಭೂತಿ ಬುಧವಾರದಿಂದ ಆರಂಭಿಸಿ 40 ದಿನಗಳ ಉಪವಾಸ ವ್ರತ ಹಾಗೂ ಧ್ಯಾನದಲ್ಲಿ ಯೇಸುವಿನ ಕಷ್ಟಗಳನ್ನು ನೆನೆದು ಈಸ್ಟರ್ ಹಬ್ಬದಂದು ಯೇಸುವಿನ ಪುನರುತ್ಥಾನದ ಮೂಲಕ ವ್ರತ ಅಂತ್ಯಗೊಳಿಸುತ್ತಾರೆ. ಈಸ್ಟರ್ ಹಬ್ಬವೂ ಕ್ರಿಸ್ಮಸ್ ಹಬ್ಬದಂತೆ ಕ್ರೈಸ್ತರಿಗೆ ಪ್ರಮುಖ ಹಬ್ಬವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT