ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸ ಶಿಕ್ಷಣ ನೀತಿಗೆ ಒತ್ತು‌ ನೀಡಬೇಕು: ಪ್ರೊ.ಅನಿಲ್ ಸಹಸ್ರಬುದ್ದೆ

Published : 16 ಸೆಪ್ಟೆಂಬರ್ 2024, 3:00 IST
Last Updated : 16 ಸೆಪ್ಟೆಂಬರ್ 2024, 3:00 IST
ಫಾಲೋ ಮಾಡಿ
Comments

ಕಾರ್ಕಳ: ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳು ಒತ್ತು‌ ನೀಡಬೇಕು. ಅದರಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಅಡಗಿದೆ ಎಂದು ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ.ಅನಿಲ್ ಸಹಸ್ರಬುದ್ದೆ ಹೇಳಿದರು.

ಇಲ್ಲಿನ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ನಡೆದ ‘ಅಧ್ಯಾಪಕ ಭೂಷಣ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ಹೊಸ ಶಿಕ್ಷಣ ನೀತಿ ಅನುಸರಿಸುವ ಮೂಲಕ ಮೌಲ್ಯಯುತವಾದ ಶಿಕ್ಷಣಕ್ಕೆ ಒತ್ತು ನೀಡಬೇಕು. ಆಧುನಿಕ ತಂತ್ರಜ್ಞಾನದ ಶಿಕ್ಷಣ ಇಂದಿನ ಅಗತ್ಯವಾಗಿದೆ. ಉಡುಪಿ, ದ.ಕ. ಜಿಲ್ಲೆಗಳು ಬ್ಯಾಂಕಿಂಗ್ ಕ್ಷೇತ್ರದ ಹುಟ್ಟೂರು ಎಂದರು.

ಮಣಿಪಾಲ ಮಾಹೆ ಸಹ ಕುಲಾಧಿಪತಿ ಎಚ್.ಎಸ್.ಬಲ್ಲಾಳ್ ಮಾತನಾಡಿ, ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆಯಬೇಕು’ ಎಂದರು.

ಜೀವಮಾನದ ಸಾಧನೆಗಾಗಿ ಮಂಗಳೂರು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಶಿಕ್ಷಣ ತಜ್ಞ ಶಂಕರ್ ರಾವ್, ಕಾಲೇಜು ಆಡಳಿತ ನಿರ್ವಹಣೆಗಾಗಿ ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಜಗದೀಶ್ ಬಾಳ, ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜು ಪ್ರಾಂಶುಪಾಲ ಬಿ.ಎ. ಕುಮಾರ ಹೆಗ್ಡೆ, ಸಂಶೋಧನ ಕ್ಷೇತ್ರದ ಸಾಧಕ ಮಂಗಳೂರು ವಿವಿ ರಸಾಯನ ವಿಜ್ಞಾನ ವಿಭಾಗ ಮುಖ್ಯಸ್ಥೆ ಪ್ರೊ. ವಿಶಾಲಾಕ್ಷಿ, ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ’ ಕಾರ್ಕಳ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್, ವಿರಾಜಪೇಟೆ ಕಾವೇರಿ ಕಾಲೇಜು ನಿವೃತ್ತ ಪ್ರಾಂಶುಪಾಲ ಆನಂದ ಕಾರ್ಲ, ಗ್ರಂಥಪಾಲಕ ವಿಭಾಗದಲ್ಲಿ ಮಂಗಳೂರಿನ ಬೆಸೆಂಟ್ ಸಂಧ್ಯಾ ಕಾಲೇಜಿನ ವಾಸಪ್ಪ ಗೌಡ, ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಯನ್ನು ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಶಂಕರನಾರಾಯಣ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷ ರಘು ಅಕ್ಕಮಂಚಿ ಅವರಿಗೆ ಪ್ರದಾನ ಮಾಡಲಾಯಿತು.

ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಸುವೃತ್ ಕುಮಾರ್, ಭುವನೆಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಎ ಶಿವಾನಂದ ಪೈ, ಬೆಂಗಳೂರು ಕೆ.ಆರ್.ಎಸ್.ಎಸ್.ಎಸ್ ಅಧ್ಯಕ್ಷ ಗುರುನಾಥ್ ಬಡಿಗೇರ್, ಕೆ.ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ಪ್ರೊ. ರೋಹಿಣಿ ಕುಮಾರ್ ಕಲಬುರ್ಗಿ, ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ, ಉಡುಪಿ ಅಧ್ಯಾಪಕ ಸಂಘಟನೆ ಯಶವಂತ ಕುದ್ರೋಳಿ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT