ಶನಿವಾರ, ಏಪ್ರಿಲ್ 1, 2023
29 °C

ಉಡುಪಿ: ಎಂಡೋಸ್ಕೋಪಿ, ಬಂಜೆತನ ಅಲ್ಟ್ರಾಸೌಂಡ್ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗದಿಂದ ಈಚೆಗೆ ಡಾ.ಟಿಎಂಎ ಪೈ ಸಭಾಂಗಣದಲ್ಲಿ ನೇರ ಪ್ರಸಾರದ ಎಂಡೋಸ್ಕೋಪಿ ಕಾರ್ಯಾಗಾರ ಮತ್ತು ಬಂಜೆತನ ಅಲ್ಟ್ರಾಸೌಂಡ್ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು.

ಎರಡು ದಿನಗಳ ಕಾರ್ಯಾಗಾರವನ್ನು ಮಣಿಪಾಲದ ಮಾಹೆಯ ಬೋಧಕ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಉದ್ಘಾಟಿಸಿದರು.

ದೇಶದ ಹಲವೆಡೆಗಳಿಂದ ಬಂದಿದ್ದ ತಜ್ಞರು ಬಂಜೆತನ ನಿವಾರಣೆಗೆ ಲಭ್ಯವಿರುವ ಶಸ್ತ್ರ ಚಿಕಿತ್ಸೆ ಮತ್ತು ಅಲ್ಟ್ರಾಸೌಂಡ್‌ನ ಕುರಿತಾಗಿ ಮಾತನಾಡಿದರು. ಬಂಜೆತನಕ್ಕೆ ಮುಖ್ಯ ಕಾರಣವಾಗಿರುವ ಎಂಡೊ ಮೆಟ್ರಿಯೊಸಿಸ್, ಫೈಬ್ರಾಯ್ಡ್ ಕುರಿತು ಚರ್ಚಿಸಲಾಯಿತು.

ಹೊಸ ಬಗೆಯ ಗ್ಯಾಜೆಟ್‌ಗಳು ಮತ್ತು ಅಲ್ಟ್ರಾಸೌಂಡ್‌ನ ತಂತ್ರಗಳೊಂದಿಗೆ ಅಂಡೋತ್ಪತ್ತಿಯ ಸರಿಯಾದ ದಿನವನ್ನು ಕಂಡುಹಿಡಿಯುವ ಬಗ್ಗೆ ಚರ್ಚೆ ನಡೆಯಿತು.

ಮಣಿಪಾಲ ಸಹಾಯಕ ಸಂತಾನೋತ್ಪತ್ತಿ ಕೇಂದ್ರ ಹಾಗೂ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಪ್ರತಾಪ್ ಕುಮಾರ್ ಕಾರ್ಯಾಗಾರದ ನೇತೃತ್ವ ವಹಿಸಿದ್ದರು.

ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಕಸ್ತೂರಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು