ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ

Last Updated 12 ಜುಲೈ 2022, 13:05 IST
ಅಕ್ಷರ ಗಾತ್ರ

ಬ್ರಹ್ಮಾವರ‌: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್‌ ವಾಹನ ಮಂಗಳವಾರ ಬ್ರಹ್ಮಾವರ ತಾಲ್ಲೂಕಿನ ಉಪ್ಪೂರು ಕೆಜಿ ರೋಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ವಾಹನ ಪಲ್ಟಿಯಾಗಿದ್ದು ಸಚಿವರ ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಹಾಗೂ ಕಾರು ಚಾಲಕ ಚರಣ್ ಅವರಿಗೆ ಗಾಯಗಳಾಗಿವೆ. ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ಪಥ ಬದಲಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT