ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯಲ್ಲಿ ಗೆದ್ದು ಮೋದಿ ಕೈ ಬಲಪಡಿಸುವೆ ಕೆ.ಎಸ್.ಈಶ್ವರಪ್ಪ

ಬೈಂದೂರಿನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ
Published 18 ಏಪ್ರಿಲ್ 2024, 17:11 IST
Last Updated 18 ಏಪ್ರಿಲ್ 2024, 17:11 IST
ಅಕ್ಷರ ಗಾತ್ರ

ಬೈಂದೂರು: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಅನುಮಾನವಿಲ್ಲ .ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೋದಿ ಅವರನ್ನು ಬೆಂಬಲಿಸುವುದು ನನ್ನ ಗುರಿ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಉಪ್ಪಂದದ ದೇವಕಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರಭಕ್ತ ಬಳಗದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸೋಲಿಸಲು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸಲು, ಹಾಗೂ ಬಿಜೆಪಿಯ ಹೊಂದಾಣಿಕೆ ರಾಜಕಾರಣವನ್ನು ಕೊನೆ ಮಾಡಲು ಕಾರ್ಯಕರ್ತರು ನನ್ನ ಜೊತೆಗೆ ಬಂದಿದ್ದಾರೆ.

ಜಾತೀಯತೆ, ಕುಟುಂಬ ರಾಜಕಾರಣ, ಹಿರಿಯ, ಕಿರಿಯ ಕಾರ್ಯಕರ್ತರ ನೋವಿಗೆ ಪರಿಹಾರ ಕಂಡುಕೊಳ್ಳಲು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಷ್ಟ್ರಭಕ್ತರ ಬಳಗದಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.

ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾತನಾಡಿ, ರಾಜ್ಯದಲ್ಲಿ ಈಶ್ವರಪ್ಪ ಅವರ ಬಗ್ಗೆ ಅನುಕಂಪದ ಅಲೆ ಎದ್ದಿದೆ. ಹಿಂದೂ ಕಾರ್ಯಕರ್ತರು ಅವರ ಪರವಾಗಿ ನಿಂತಿದ್ದಾರೆ. ಎಲ್ಲಾ ಸಮಾಜವನ್ನು ಗೌರವಿಸುತ್ತಾ ಬಂದಿರುವ ಈಶ್ವರಪ್ಪ ಅವರಿಗೆ ಅನ್ಯಾಯವಾಗಿರುವುದು ಬೇಸರದ ವಿಚಾರ. ಈ ಬಾರಿಯ ಚುನಾವಣೆಯಲ್ಲಿ ಈಶ್ವರಪ್ಪಗೆ ದೊರೆತಿರುವ ಬೆಂಬಲ ನೋಡಿದರೆ ಗೆಲ್ಲುವ ವಿಶ್ವಾಸವಿದೆ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾರಾಯಣ ಗುಜ್ಜಾಡಿ, ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಯಶವಂತ ಗಂಗೊಳ್ಳಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ದೇವಾಡಿಗ ಕಂಚಿಕಾನ್, ರಾಷ್ಟ್ರಭಕ್ತರ ಬಳಗ ಬೈಂದೂರು ಮುಖಂಡರಾದ ಮಂಜುನಾಥ ರಾವ್, ಗಣೇಶ್‌ರಾವ್, ರೇಣುಕಾ, ಚಂದ್ರಯ್ಯ ಆಚಾರ್ಯ, ವಿನೋದ್ ಹೆಬ್ಬಾರ್, ವಿಷ್ಣು, ವಿನಯ್ ನಾಯರಿ ನಾವುಂದ ಇದ್ದರು.

ಶ್ರೀಧರ ಬಿಜೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲಕೃಷ್ಣ ನಾಡ ಕಾರ್ಯಕ್ರಮ ನಿರೂಪಿಸಿದರು, ಶ್ರೀಧರ ದೇವಾಡಿಗ ಬಡಾಕೆರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT