ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆ ಸುದ್ದಿ ಆಕಾಶದಿಂದ ಉದುರಿತೇ: ಈಶ್ವರಪ್ಪ

Last Updated 5 ನವೆಂಬರ್ 2020, 16:44 IST
ಅಕ್ಷರ ಗಾತ್ರ

ಉಡುಪಿ: ‘ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಬಳಿಕ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದ್ದು, ಏನೇನೋ ಮಾತನಾಡುತ್ತಿದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಉಡುಪಿಯ ಕೃಷ್ಣಮಠಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದ ಸಚಿವರು, ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂಬ ಸುದ್ದಿ ಸಿದ್ದರಾಮಯ್ಯ ಅವರಿಗೆ ಆಕಾಶದಿಂದ ಉದುರಿ ಸಿಕ್ಕಿದೆಯೇ, ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಅಮಿತ್ ಶಾ ಅವರೇನಾದರೂ ತಿಳಿಸಿದ್ದಾರಾ’ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಕೊಲೆ ಪ್ರಕರಣ ತನಿಖೆ ಮಾಡಬಾರದೆ, ಕೊಲೆಗೆ ಕಾಂಗ್ರೆಸ್ ಬೆಂಬಲ ಕೊಡುತ್ತದೆಯೇ, ಸಿದ್ದರಾಮಯ್ಯ ಬೆಂಬಲ ಕೊಡುವುದಾದರೆ ಬಹಿರಂಗವಾಗಿ ಒಪ್ಪಿಕೊಳ್ಳಲಿ’ ಎಂದರು.

ಬಾಯಿಗೆ ಬಂದಂತೆ ಮಾತನಾಡುವುದು ವಿರೋಧ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್‌ನ ಧೋರಣೆಯನ್ನು ಖಂಡಿಸುತ್ತೇವೆ. ತಪ್ಪು ಮಾಡದಿದ್ದರೆ ವಿನಯ ಕುಲಕರ್ಣಿ ಬಿಡುಗಡೆಯಾಗಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ದೇವರ ದರ್ಶನದ ಬಳಿಕ ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು, ಕೆಲಹೊತ್ತು ಸಮಾಲೋಚನೆ ನಡೆಸಿದರು. ಬಳಿಕ ಕುರುಬ ಸಮಾಜದ ಮುಖಂಡರು ರಥಬೀದಿಯಲ್ಲಿ ಕನಕನ ಗುಡಿ ನಿರ್ಮಾಣ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಈ ಸಂದರ್ಭ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT