ಕಾರ್ಕಳ: ಭಾರತದ ಕ್ರಿಕೆಟ್ ತಂಡದ ಮಾಜಿ ಕೋಚ್, ವಿಕ್ಷಕ ವಿವರಣೆಗಾರ ರವಿ ಶಾಸ್ತ್ರಿ ಅವರು ತಾಲ್ಲೂಕಿನ ಬೈಲೂರು ಎರ್ಲಪಾಡಿಯ ಕರ್ವಾಲು ಶ್ರೀವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.

ವಿಷ್ಣುಮೂರ್ತಿ ದೇವರಿಗೆ ಹೂವಿನ ಪೂಜೆ ಸಲ್ಲಿಸಿ, ನಾಗಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕ ಮಾಡಿಸಿದರು.

‘13 ವರ್ಷಗಳಿಂದ ಪ್ರತಿವರ್ಷ ಕರ್ವಾಲು ಕ್ಷೇತ್ರಕ್ಕೆ ಬರುತ್ತಿದ್ದೇನೆ. ಇಲ್ಲಿಗೆ ಬಂದಾಗ ನನ್ನ ಮನಸ್ಸಿಗೆ ನೆಮ್ಮದಿ ಹಾಗೂ ದೇವರ ಅನುಗ್ರಹ ಪ್ರಾಪ್ತವಾಗಿದೆ’ ಎಂದರು.

ಬೈಲೂರು ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತಸರ ಅನಂತ ಪಟ್ಟಾಭಿ ರಾವ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಭೋಜ ಶೆಟ್ಟಿ, ಪ್ರಮುಖರಾದ ಸಂದೀಪ್ ಶೆಟ್ಟಿ, ಸುಧಾಕರ ಹೆಗ್ಡೆ, ಪ್ರಶಾಂತ್ ಶೆಟ್ಟಿ, ದಿಲೀಪ್ ಶೆಟ್ಟಿ ನೀರೆ, ದೇವಸ್ಥಾನದ ತಂತ್ರಿ ವರದರಾಜ್ ತಂತ್ರಿ, ಹರಿಶ್ಚಂದ್ರ ರಾವ್, ರವಿ ಶಾಸ್ತ್ರಿ ಅವರ ಕುಟುಂಬಸ್ಥರಾದ ವಾದಿರಾಜ ಪೆಜತ್ತಾಯ ಭಾಗವಹಿಸಿದ್ದರು.

ದೇವಸ್ಥಾನದ ವತಿಯಿಂದ ರವಿಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು.

ದೇವಸ್ಥಾನದ ನವೀಕರಣ ಕಾರ್ಯನಡೆಯುತ್ತಿದ್ದು, ದೇವಸ್ಥಾನದ ರಸ್ತೆಯಲ್ಲಿ ಸ್ವಾಗತ ಗೋಪುರ ನಿರ್ಮಿಸುವಂತೆ ದೇವಾಲಯ ವತಿಯಿಂದ ಶಾಸ್ತ್ರಿ ಅವರಿಗೆ ಮನವಿ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.