ಗುರುವಾರ , ಜೂನ್ 4, 2020
27 °C

ಇಕೆವೈಸಿ ನೋಂದಣಿ ಸಮಯ ವಿಸ್ತರಣೆ: ಸಚಿವ ಕೆ.ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಪಡಿತರ ಕೇಂದ್ರಗಳಲ್ಲಿ ಇಕೆವೈಸಿ ನೋಂದಣಿ ಸಮಯವನ್ನು ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಪಡಿತರ ವಿತರಣಾ ಕೇಂದ್ರಗಳು ಬೆಳಿಗ್ಗೆ 10ರಿಂದ 5ರವರೆಗೆ ತೆರೆಯುತ್ತಿದ್ದು, ಈ ಅವಧಿಯಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುತ್ತಿರುವುದರಿಂದ ಇಕೆವೈಸಿಗೆ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ.

2 ತಿಂಗಳ ಇಕೆವೈಸಿ ಅವಧಿಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಉಳಿದ ದಿನ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆಯುವಂತೆ ಸೂಚನೆ ನೀಡಲಾಗಿದೆ. ಸೋಮವಾರದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.

ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ಗಳನ್ನು ಪಡೆದಿದ್ದರೆ 2 ತಿಂಗಳೊಳಗೆ ವಾಪಸ್‌ ಮಾಡಬೇಕು. ಇಲ್ಲವಾದರೆ, ದಂಡದ ವಿಧಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದುವರೆಗೂ ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹರು ಮರಳಿಸಿದ್ದಾರೆ. ₹ 96 ಲಕ್ಷಕ್ಕೂ ಹೆಚ್ಚು ದಂಡ ಪಾವತಿಸಿದ್ದಾರೆ. ಖುದ್ದು ಕಾರ್ಡ್ ಮರಳಿಸಿದರೆ ದಂಡವಿಲ್ಲ, ಸಿಕ್ಕಿಬಿದ್ದರೆ ಇದುವರೆಗೂ ಪಡೆದ ಪಡಿತರಕ್ಕೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು