ಉಡುಪಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿ, ಹಣ ಸುಲಿಗೆ ಮಾಡಿದ ಆರೋಪದಲ್ಲಿ ಮಹಿಳೆ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿಯ ಸೈಪುಲ್ಲಾ (38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸಿರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೊನಿಯ ಅಬ್ದುಲ್ ಸತ್ತಾರ್ (23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಬ್ದುಲ್ ಅಝೀಝ್, ಕುಂದಾಪುರ ಎಂ. ಕೋಡಿಯ ಆಸ್ಮಾ (43) ಬಂಧಿತ ಆರೋಪಿಗಳು.

ಸಂದೀಪ ಕುಮಾರ್ ಎಂಬುವವರು ಮೂರು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಿದ್ದಾಗ ಸವಾದ್ನ ಪರಿಚಯವಾಗಿದ್ದು, ಮುಂದೆ ಆತನ ಸ್ನೇಹಿತರಾದ ಉಳಿದ ಆರೋಪಿಗಳ ಪರಿಚಯ ಕೂಡ ಆಗಿತ್ತು. ಇದೇ ವೇಳೆ ಸವದ್, ಆಸ್ಮಾ ಎಂಬಾಕೆಯನ್ನು ಪರಿಚಯ ಮಾಡಿಕೊಟ್ಟು ಮೊಬೈಲ್ ನಂಬರ್ ಕೊಟ್ಟಿದ್ದನು. ಆಕೆಗೆ ಸಂದೀಪ್ ಕರೆ ಮಾಡಿದ್ದು, ಆಕೆ ಸಂದೀಪ್ ಅವರನ್ನು ಕುಂದಾಪುರಕ್ಕೆ ಬರಲು ತಿಳಿಸಿದ್ದಳು. ಅದರಂತೆ ಸಂದೀಪ್ ಸೆ.2ರಂದು ಸಂಜೆ ಕುಂದಾಪುರದ ಮಲ್ನಾಡ್ ಪೆಟ್ರೋಲ್ ಬಂಕ್ ಬಳಿ ಹೋಗಿದ್ದರು. ಅಲ್ಲಿ ಆಸ್ಮಾ, ಸಂದೀಪ್ ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದಳು ಎಂದು ದೂರಲಾಗಿದೆ.

ಬಳಿಕ ಆಸ್ಮಾ ಉಳಿದ ಆರೋಪಿಗಳನ್ನು ಕರೆ ಮಾಡಿ ಕರೆಸಿದ್ದಳು. ಆರೋಪಿ ಮೊಹಮ್ಮದ್ ನಾಸೀರ್ ಶರೀಫ್ ಚಾಕು ತೋರಿಸಿ ₹3 ಲಕ್ಷ ಕೊಟ್ಟು ಹೋಗಬೇಕು ಎಂದು ಸಂದೀಪ್ ಅವರಿಗೆ ಬೆದರಿಕೆ ಹಾಕಿದ್ದ. ಈ ವೇಳೆ ಸಂದೀಪ್ ಓಡಿ ಹೋಗಲು ಪ್ರಯತ್ನಿಸಿದಾಗ ಸವದ್, ಸೈಪುಲ್ಲಾ, ಮೊಹಮ್ಮದ್ ನಾಸೀರ್ ಶರೀಫ್ , ಅಬ್ದುಲ್ ಸತ್ತಾರ್ ಮತ್ತು ಅಬ್ದುಲ್ ಅಜೀಜ್ ಸೇರಿ ಕೈಗಳನ್ನು ನೈಲಾನ್ ಹಗ್ಗದಿಂದ ಕಟ್ಟಿ, ಕೈಯಿಂದ ಹಲ್ಲೆ ಮಾಡಿದ್ದು, ಬಳಿಕ ರಾಡ್ ನಿಂದಲೂ ಹೊಡೆದಿದ್ದಾರೆ. ಬಳಿಕ ಒಟ್ಟು ₹80 ಸಾವಿರ ಸುಲಿಗೆ ಮಾಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಸಂದೀಪ್ ಅವರು ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.