ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಂದಿಕೂರು: ಕಂಪನಿ ವಿರುದ್ಧ ಪ್ರತಿಭಟನೆಗೆ ನಿರ್ಣಯ

Published 7 ಜುಲೈ 2024, 6:32 IST
Last Updated 7 ಜುಲೈ 2024, 6:32 IST
ಅಕ್ಷರ ಗಾತ್ರ

ಪಡುಬಿದ್ರಿ: ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಬಯೊ ಡೀಸೆಲ್ ತಾಳೆ ಎಣ್ಣೆ ತಯಾರಿಕಾ ಘಟಕದಿಂದ ಹೊರಸೂಸುವ ದುರ್ವಾಸನೆಯಿಂದ ಪರಿಸರ ಮಾಲಿನ್ಯ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಜುಲೈ 30ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

ಶುಕ್ರವಾರ ನಂದಿಕೂರು ದುರ್ಗಾ ಪರಿಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಪಲಿಮಾರು ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪ್ರತಿಭಟನೆಗೂ ಮೊದಲು ಪಲಿಮಾರು ಗ್ರಾಮ ಪಂಚಾಯಿತಿ ವಿಶೇಷ ಗ್ರಾಮಸಭೆ ಕರೆದು ಕಂಪನಿ ವಿರುದ್ಧ ನಿರ್ಣಯ ಕೈಗೊಳ್ಳುವವ ಬಗ್ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ಸ್ಥಳೀಯ ಪಲಿಮಾರು, ಪಡುಬಿದ್ರಿ, ಎಲ್ಲೂರು, ಇನ್ನಾ, ಹೆಜಮಾಡಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಗ್ರಾಮಸಭೆ ಕರೆದು ಪಕ್ಷಾತೀತವಾಗಿ ಕಂಪನಿ ಎದುರು ಪ್ರತಿಭಟನೆ ನಡೆಸಲು ನಿರ್ಣಯಿಸಲಾಯಿತು. ಕಾನೂನು ಹೋರಾಟದ ಬಗ್ಗೆ ಊರಿನ ಮುಖಂಡರು, ವಕೀಲರನ್ನು ಒಳಗೊಂಡಂತೆ ಸಮಿತಿ ರಚಿಸುವುದು, ಸರ್ಕಾರ, ಇಲಾಖೆ ಅಧಿಕಾರಿಗಳ ವಿರುದ್ಧ ಒತ್ತಡ ಹೇರುವ ಬಗ್ಗೆಯೂ ತೀರ್ಮಾನಿಸಲಾಯಿತು.

ಪರಿಸರ ಹೋರಾಟಗಾರ ಪ್ರೇಮಾನಂದ ಕಲ್ಮಾಡಿ ಮಾತನಾಡಿ, ಜನರ ಆರೋಗ್ಯ, ಪರಿಸರಕ್ಕೆ ಮಾರಕವಾಗುವಂತಹ ಕಂಪನಿ ವಿರುದ್ಧ ಸಂಘಟಿತ ಹೋರಾಟದ ಅಗತ್ಯ ಇದೆ. ಪಕ್ಷಾತೀತವಾಗಿ ಹೋರಾಟದಲ್ಲಿ ಪಾಲ್ಗೊಂಡಲ್ಲಿ ಯಶಸ್ಸು ಸಾಧ್ಯ. ಈ ನಿಟ್ಟಿನಲ್ಲಿ ಸ್ಥಳೀಯರು ಚಿಂತನೆ ನಡೆಸಬೇಕು ಎಂದರು.

ಪಲಿಮಾರು ಹೋರಾಟ ಸಮಿತಿ ಪ್ರಮುಖ ದಿನೇಶ್ ಪಲಿಮಾರ್ ಮಾತನಾಡಿ, ಫ್ಯಾಕ್ಟರಿ ವಿರುದ್ಧ ಹೋರಾಟ ನಡೆಸಿ ಮುಚ್ಚುವಂತೆ ಒತ್ತಾಯಿಸಲಾಗುವುದು ಎಂದರು.

ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧ್ವರಾಯ ಭಟ್, ನವೀನ್‌ಚಂದ್ರ ಜೆ.ಶೆಟ್ಟಿ, ನಾಗೇಶ್ ರಾವ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶಶಿಕಾಂತ್ ಪಡುವಿದ್ರಿ, ಲಕ್ಷ್ಮಣ್ ಎಲ್.ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಗಾಯತ್ರಿ ಪ್ರಭು, ಸಂದೀಪ್ ಪಲಿಮಾರ್, ಗಿರೀಶ್ ಪಲಿಮಾರು, ಸುಧೀರ್ ಕರ್ಕೇರ, ಜಿತೇಂದ್ರ ಶೆಟ್ಟಿ, ಮಧುಕರ ಸುವರ್ಣ, ಶ್ರೀನಿವಾಸ ಶರ್ಮ, ರವೀಂದ್ರ ಪ್ರಭು, ಸತೀಶ್ ಗುಡ್ಡಚ್ಚಿ, ಚಂದ್ರಹಾಸ್ ಶೆಟ್ಟಿ, ಅಮರನಾಥ್ ಶೆಟ್ಟಿ, ದೀಪಕ್ ಕಾಮತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT