ಸರ್ಕಲ್ ಇನ್‌ಸ್ಪೆಕ್ಟರ್ ಹೆಸರಲ್ಲಿ ನಕಲಿ ಖಾತೆ
ಉಡುಪಿ: ಉಡುಪಿ ನಗರ ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಮಂಜುನಾಥ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ಮತ್ತೊಮ್ಮೆ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ನಕಲಿ ಖಾತೆ ರಚಿಸಿದ್ದ ವಂಚಕರು ಹಲವರಿಗೆ ಹಣಕ್ಕೆ ಬೇಡಿಕೆ ಇರಿಸಿದ್ದರು. ಇದರ ವಿರುದ್ಧ ಸಿಪಿಐ ಮಂಜುನಾಥ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.
ಸ್ನೇಹಿತರು ಹಾಗೂ ಪರಿಚಿತರು ವಂಚಕರ ಜಾಲದ ಬಗ್ಗೆ ಎಚ್ಚರವಾಗಿರಬೇಕು. ನನ್ನ ಹೆಸರಿನಲ್ಲಿ ಹೊಸದಾಗಿ ಸ್ನೇಹದ ಕೋರಿಕೆಗೆ ಒಪ್ಪಿಗೆ ಸೂಚಿಸಬಾರದು ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.